ಬೆಂಗಳೂರು: ಬಾಡಿಗೆದಾರರು ಹಾಗೂ ಇತರೆ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿದರೆ ಸಾಕು ಎಂದು ಇಂಧನ ಇಲಾಖೆ ತಿಳಿಸಿದೆ.

ಈ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಇಂಧನ ಇಲಾಖೆ ಈ ಸ್ಪಷ್ಟನೆ ನೀಡಿದೆ.

ಈ ಯೋಜನೆಯು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಗೃಹ ವಿದ್ಯುತ್ ಬಳಕೆದಾರಿಗೂ ಅನ್ವಯವಾಗಲಿದೆಯೇ ಎನ್ನುವ ಪ್ರಶ್ನೆಗೆ ಈ ವಿವರ ನೀಡಲಾಗಿದೆ.

ಗೃಹ ವಿದ್ಯುತ್ ಬಳಕೆದಾರರು ಬಾಡಿಗೆದಾರರಾಗಿದ್ದಲ್ಲಿ, ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿ ನೋಂದಾಯಿಸುವ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ.

ಗೃಹ ಜ್ಯೋತಿ ಯೋಜನೆಯನ್ನು ಕೆಲವು ಷರತ್ತುಗಳೊಂದಿಗೆ ಜುಲೈ 1ರಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಯ ನೋಂದಣಿ ಇದೇ 18ರಿಂದ ಆರಂಭವಾಗಲಿದೆ.

ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/gruhajyothi ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.