ಬೆಂಗಳೂರು: ಆಳಂದ ತಾಲೂಕಿನಲ್ಲಿ ಇತ್ತೀಚೆಗೆ ನಡೆದಿದ್ದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮೂರೂ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ರಾಜ್ಯ ಆಮ್ ಆದ್ಮಿ ಪಕ್ಷ (ಎಎಪಿ), ‘ಎಲ್ಲರ ಮನೆಯಲ್ಲಿಯೂ ಶೌಚಾಲಯ ಇರುವಂತೆ ನೋಡಿಕೊಂಡಿದ್ದರೆ ಇವತ್ತು ಆ ಮಗು ಸಾಯುತ್ತಿರಲಿಲ್ಲ’ ಎಂದು ಹೇಳಿದೆ.

ಬಯಲು ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ ಘಟನೆ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಮಂಗಳವಾರ ನಡೆದಿತ್ತು. ಕಾನೂನು ಸಂಘರ್ಷಕ್ಕೆ ಒಳಪಟ್ಟ ಒಬ್ಬ ಬಾಲಕನನ್ನು ಈ ಪ್ರಕರಣದ ಸಂಬಂಧವಾಗಿ ಪೊಲೀಸರು ಮರುದಿನ ವಶಕ್ಕೆ ಪಡೆದಿದ್ದರು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಎಎಪಿ, ರಾಜ್ಯದಲ್ಲಿ ಈ ವರೆಗೆ ಆಡಳಿತ ನಡೆಸಿರುವ ಕಾಂಗ್ರೆಸ್, ಜೆಡಿಎಸ್, ಬಿಜೆಪಿಯನ್ನು ಕಟುವಾಗಿ ಟೀಕಿಸಿದೆ.

‘ಇದು, ಮೇಲ್ನೋಟಕ್ಕೆ ಒಂದು ಹೆಣ್ಣಿನ ಮೇಲೆ ನಡೆದ ದೌರ್ಜನ್ಯವಾದರೂ, ಇದುವರೆಗೂ ಆಡಳಿತ ಮಾಡಿರುವ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಾಡಿನ ಹೆಣ್ಣು ಕುಲದ ಮೇಲೆ ಮಾಡಿರುವ ದೌರ್ಜನ್ಯ. ಎಲ್ಲರ ಮನೆಯಲ್ಲಿಯೂ ಶೌಚಾಲಯ ಇರುವಂತೆ ನೋಡಿಕೊಂಡಿದ್ದರೆ ಇವತ್ತು ಆ ಮಗು ಸಾಯುತ್ತಿರಲಿಲ್ಲ’ ಎಂದಿದು ಅಭಿಪ್ರಾಯಪಟ್ಟಿದೆ.

ಇವುಗಳನ್ನೂ ಓದಿ

ಆಳಂದ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ: ಒಬ್ಬ ವಶಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.