ಬೆಂಗಳೂರು: ರಾಜ್ಯ ಸರ್ಕಾರದ ಗುತ್ತಿಗೆ ಮತ್ತು ಟೆಂಡರ್ಗಳಲ್ಲಿ ಮಧ್ಯಸ್ಥಿಕೆ ಕಲಂ ಅನ್ನು ರದ್ದುಪಡಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಮಧ್ಯಸ್ಥಕೆ ಕಲಂನಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಆಗುತ್ತಿರುವುದು ಕಾನೂನು ಇಲಾಖೆಯ ಗಮನಕ್ಕೆ ಬಂದಿದ್ದು, ಆದ್ದರಿಂದ ಈ ಕಲಂ ಅನ್ನು ಕೈಬಿಡಲು ತೀರ್ಮಾನಿಸಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ. ಇಲ್ಲಿಯವರೆಗೆ ಮಧ್ಯಸ್ಥಿಕೆ ಕಲಂ ಕಡ್ಡಾಯವಾಗಿತ್ತು ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಈ ಕಲಂ ರದ್ದು ಪಡಿಸಿರುವುದರಿಂದ ಗುತ್ತಿಗೆದಾರರು ಮತ್ತು ಟೆಂಡರ್ ಪಡೆದವರು ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಹಲವು ಪ್ರಕರಣಗಳಲ್ಲಿ ಈ ಕಲಂ ಅನ್ನು ಬಳಸಿಕೊಂಡು ನ್ಯಾಯಾಲಯಗಳ ಮೆಟ್ಟಿಲು ಏರಿದ ಕಾರಣ ಸರ್ಕಾರ ಆರ್ಥಿಕವಾಗಿ ನಷ್ಟ ಅನುಭವಿಸಿತ್ತು. ಅತ್ಯಂತ ಪ್ರಮುಖ ಎನಿಸುವ ಒಂದೆರಡು ಪ್ರಕರಣಗಳಲ್ಲಿ ಮಧ್ಯಸ್ಥಿಕೆಯ ಅಗತ್ಯ ಇದೆ ಎಂದು ಕಂಡುಬಂದರೆ ಕಾನೂನು ಇಲಾಖೆ ಅದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲು ನಿರ್ಣಯಿಸಲಾಗಿದೆ ಎಂದು ಪಾಟೀಲ ಹೇಳಿದರು.

ಈ ಕಲಂನಿಂದ ಖಾಸಗಿ ವ್ಯಕ್ತಿಗಳ ಜತೆ ಸರ್ಕಾರ ಇತ್ಯರ್ಥಮಾಡಿಕೊಳ್ಳುವ ವ್ಯವಸ್ಥೆ ಸರಿಯಲ್ಲ. ಇಂತಹ ನೂರಾರು ಪ್ರಕರಣಗಳು ಮುಂದಿನ ದಿನಗಳಲ್ಲಿ ಬರುವ ಸಾಧ್ಯತೆ ಇರುವುದರಿಂದ, ಮುಂದುವರೆಸುವುದು ಸರಿಯಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು. ಇದು ವ್ಯವಸ್ಥೆಯ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಮಧ್ಯಸ್ಥಿಕೆ ಪ್ರಕರಣವೊಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಆಗಿ, ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಲು ನಿರ್ಧರಿಸಲಾಯಿತು ಎಂದು ಅವರು ತಿಳಿಸಿದರು.

ಮಧ್ಯಸ್ಥಿಕೆ ಕಲಂ ರದ್ದುಗೊಳಿಸಿರುವ ಸಂಬಂಧ ಇದೇ 16 ರಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ಅವರು ಹೇಳಿದರು.

ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ತಗ್ಗಿಸಲು ಕ್ರಮ

ರಾಜ್ಯದಲ್ಲಿ ಒಟ್ಟು 1,006 ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಗಳು ಬಾಕಿ ಉಳಿದಿದ್ದು, ಮುಂದಿನ ಮಾರ್ಚ್ 31 ರೊಳಗೆ ಆ ಸಂಖ್ಯೆಯನ್ನು ಎರಡು ಅಂಕಿಗೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ನ್ಯಾಯಾಲಯಗಳ ಆದೇಶ ಮತ್ತು ಸೂಚನೆಗಳನ್ನು ಅಧಿಕಾರಿಗಳು ಪಾಲಿಸದ ಕಾರಣ ಹಿಂದೆ 2,500 ಕ್ಕೂ ಹೆಚ್ಚು ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಗಳು ಇದ್ದವು. ಈಗ ಆ ಸಂಖ್ಯೆ 1,006 ಕ್ಕೆ ಇಳಿದಿದೆ ಎಂದು ಅವರು ವಿವರಿಸಿದರು.

ಇತ್ತೀಚೆಗೆ ನಡೆದ ಕಾನೂನು ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ವಿವರವಾಗಿ ಚರ್ಚಿಸಲಾಯಿತು. 10 ವರ್ಷಗಳಲ್ಲಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ಆರೋಗ್ಯಕರವಲ್ಲದ ರೀತಿಯಲ್ಲಿ ಏರಿಕೆ ಆಗುತ್ತಿರುವುದು ಆರೋಗ್ಯಕರ ಲಕ್ಷಣವಲ್ಲ. ನ್ಯಾಯಾಲಯಗಳು ಕೊಟ್ಟ ಆದೇಶ ಮತ್ತು ಸೂಚನೆಗಳ ಬಗ್ಗೆ ಗೌರವ ಕಡಿಮೆ ಆಗುತ್ತಿದೆ ಎಂಬುದರ ಸೂಚಕವಿದು. ಅಧಿಕಾರಿಗಳು ಕಟ್ಟುನಿಟ್ಟಾಗಿ ನ್ಯಾಯಾಲಯದ ಆದೇಶಗಳನ್ನು ಪಾಲಿಸಬೇಕು ಮತ್ತು ಸ್ಪಂದನಶೀಲರಾಗಬೇಕು ಎಂದು ಪಾಟೀಲ ಹೇಳಿದರು.

ಆದ್ದರಿಂದ ನ್ಯಾಯಾಂಗ ನಿಂದನೆ ಪ್ರಕರಣ ಸಂಖ್ಯೆಯನ್ನು ಗಣನೀಯವಾಗಿ ತಗ್ಗಿಸಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮಾರ್ಚ್ 31 ಗುರಿ ನಿಗದಿ ಮಾಡಲಾಗಿದೆ. ಶೇ 99 ರಷ್ಟು ಪ್ರಕರಣಗಳನ್ನು ಇತ್ಯರ್ಥ ಮಾಡಲು ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.