ಬೆಂಗಳೂರು: ಯುವತಿಯೊಬ್ಬರ ಜೊತೆ ಸಲುಗೆ ಬೆಳೆಸಿ ಲೈಂಗಿಕ ಸಂಪರ್ಕವಿಟ್ಟುಕೊಂಡಿದ್ದ ಸಚಿವರೊಬ್ಬರ ‘ಸಿ.ಡಿ’ ಬಗ್ಗೆ ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರು ನಗರದ ಕಬ್ಬನ್ ಪಾರ್ಕ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಸಚಿವರೊಬ್ಬರ ‘ಸಿ.ಡಿ’ ಬಯಲು; ಸಂತ್ರಸ್ತೆ ಪರ ಕಬ್ಬನ್ ಪಾರ್ಕ್ ಠಾಣೆಗೆ ದೂರು?

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ‘ದಿನೇಶ್ ಎಂಬುವರು ಠಾಣೆಗೆ ಬಂದು ನಮಗೊಂದು ದೂರು ಕೊಟ್ಟಿದ್ದಾರೆ. ತನಿಖೆ ಆರಂಭಿಸಲಾಗಿದ್ದು, ಸಂತ್ರಸ್ತೆ ಹಾಗೂ ಅವರ ಕುಟುಂಬದವರನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದರು.

ಇದನ್ನೂ ಓದಿ:‘ಆ’ ಸಚಿವರ ತವರಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ!

‘ಸಚಿವರು, ಮಹಿಳೆಗೆ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಹಾಗೂ ಕುಟುಂಬಸ್ಥರು, ತನಗೆ ತಿಳಿಸಿರುವುದಾಗಿ ದೂರುದಾರ ದಿನೇಶ್ ಹೇಳಿದ್ದಾರೆ. ಅವರಿಂದ ಮತ್ತಷ್ಟು ಮಾಹಿತಿ ಪಡೆಯಬೇಕಿದೆ. ನಾವೇ ಸಂತ್ರಸ್ತೆ ಹಾಗೂ ಕುಟುಂಬದವರನ್ನು ಸಂಪರ್ಕಿಸಿ ಹೇಳಿಕೆ ಪಡೆದು ಮುಂದಿನ ಕ್ರ ಕೈಗೊಳ್ಳುತ್ತೇವೆ’ ಎಂದೂ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.