ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಹಲಾಲ್ ಕಟ್ vs ಜಟ್ಕಾ ಕಟ್ ವಿಚಾರದ ಬಗ್ಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸಿದ್ದಾರೆ.

ಹಲಾಲ್ ಕಟ್ ವಿಚಾರವಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಚೇತನ್, ‘ಕರ್ನಾಟಕದಲ್ಲಿ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ಮಾಂಸ ಮಾರಾಟಗಾರರನ್ನು ನಿಷೇಧಿಸಲು ಜಟ್ಕಾ ಕಟ್ ಮಾಂಸವನ್ನು ಒತ್ತಾಯಿಸಿ ದಂಗೆ ಎಬ್ಬಿಸುತ್ತಿದ್ದಾರೆ. ನಾವು ಕೊಲ್ಲುವ ಮಾರ್ಗಗಳ ಕುರಿತು ಹೋರಾಡುವ ಬದಲು, ಹೆಚ್ಚಿನ ಜೀವಗಳನ್ನು ರಕ್ಷಿಸುವ ಕೆಲಸ ಮಾಡಬೇಕು ಅಲ್ಲವೆ? ಸದ್ಯದ ಪರಿಸ್ಥಿತಿಯಲ್ಲಿ ಬುದ್ಧನ ಅಹಿಂಸೆಯ ಅಗತ್ಯವಿದೆ’ ಎಂದು ಬರೆದುಕೊಂಡಿದ್ದಾರೆ.

ಓದಿ...ಸಾಂದರ್ಭಿಕ ಕೂಸು ಹಿಂದುತ್ವದ ಪಾಠ ಮಾಡುತ್ತಿದೆ: ಎಚ್ಡಿಕೆ ವಿರುದ್ಧ ಬಿಜೆಪಿ ಗರಂ

ರಾಜ್ಯದಲ್ಲಿ ಹಿಜಾಬ್ ವಿವಾದ, ಮುಸ್ಲಿಂ ವರ್ತಕರಿಗೆ ಆರ್ಥಿಕ ಬಹಿಷ್ಕಾರದ ಬಳಿಕ ಹಲಾಲ್ ಕಟ್‌ಗೆ ವಿರೋಧದ ಸರಣಿ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ಚೇತನ್ ಅವರ ಫೇಸ್‌ಬುಕ್ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚೆಗೆ ‘ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಬರಹ ಪ್ರಕಟಿಸಿದ್ದಾರೆ’ ಎಂಬ ಆರೋಪದಡಿ ಬಂಧನಕ್ಕೊಳಪಟ್ಟಿದ್ದ ಚೇತನ್ ಅವರು ಜಾಮೀನು ಮೇಲೆ ಬಿಡುಗಡೆ ಆಗಿದ್ದಾರೆ.

ಫೆ. 22ರಂದು ಚೇತನ್ ಅವರನ್ನು ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದರು. 14 ದಿನಗಳವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅವರಿದ್ದರು.

ಓದಿ... ಕೋಮು ವಿಭಜನೆ ಮಾರಕ: ಚರ್ಚೆಗೆ ಗ್ರಾಸವಾದ ಕಿರಣ್ ಮಜುಂದಾರ್ ಷಾ ಟ್ವೀಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.