ಬೆಂಗಳೂರು: ಖಾಸಗಿ ಫೋಟೊ ಹಾಗೂ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಮಾಜಿ ಪ್ರೇಯಸಿಗೆ ‘ಬ್ಲ್ಯಾಕ್‌ಮೇಲ್’ ಮಾಡಿದ್ದ ಆರೋಪದ ಮೇಲೆ ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಪಶ್ಚಿಮ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇರೆಗೆ ನಟ ವರುಣ್ ಆರಾಧ್ಯ ವಿರುದ್ಧ ಪ್ರರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಬೃಂದಾವನ’ ಧಾರಾವಾಹಿಯಲ್ಲಿ ವರುಣ್ ಆರಾಧ್ಯ ನಟಿಸಿದ್ದರು. ಸಂತ್ರಸ್ತೆ, ಇನ್ಸ್ಟಾಗ್ರಾಮ್ನ ಜಾಹೀರಾತು ವಿಭಾಗದಲ್ಲಿ ಕೆಲಸ ಮಾಡುವಾಗ 2019ರಲ್ಲಿ ಆರೋಪಿಯ ಪರಿಚಯವಾಗಿ ಸ್ನೇಹಕ್ಕೆ ತಿರುಗಿತ್ತು. ಕ್ರಮೇಣ ಸ್ನೇಹ ಪ್ರೀತಿಗೆ ತಿರುಗಿ ಪರಸ್ಪರ ಇಬ್ಬರೂ ಪ್ರೀತಿಸಿದ್ದರು. ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಮಧ್ಯೆ ವಿರಸವಾಗಿ ಕೆಲ ತಿಂಗಳಿಂದ ದೂರವಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ನಟನ ಮೊಬೈಲ್ ಪರಿಶೀಲಿಸಿದಾಗ ಬೇರೆ ಯುವತಿಯರ ಖಾಸಗಿ ಫೋಟೊ ಇಟ್ಟುಕೊಂಡಿರುವುದು ಗೊತ್ತಾಯಿತು. ಈ ಬಗ್ಗೆ ಪ್ರಶ್ನಿಸಿದಾಗ ಬೆದರಿಕೆ ಹಾಕಿದ್ದರು. ಯಾರಿಗಾದರೂ ಹೇಳಿದರೆ, ನನ್ನ ಖಾಸಗಿ ಫೋಟೊ ಹಾಗೂ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದರು’ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.