ಮಂಗಳೂರು: ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಪ್ರಕರಣದ ಆರೋಪಿ ಆದಿತ್ಯ ರಾವ್ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಆರನೇ ಜೆಎಂಎಫ್ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ಜನವರಿ 20ರಂದು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿತ್ತು. ಜ.22ರಂದು ಆದಿತ್ಯ ರಾವ್ ಬೆಂಗಳೂರಿನ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಜ.23ರಂದು ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹತ್ತು ದಿನಗಳ ಕಾಲ ತನಿಖಾ ತಂಡದ ವಶಕ್ಕೆ ನೀಡಲಾಗಿತ್ತು.

ಕಸ್ಟಡಿ ಅವಧಿ ಮುಗಿದ ಕಾರಣದಿಂದ ಆರೋಪಿಯನ್ನು ಶನಿವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಯನ್ನು ಮತ್ತೆ ವಶಕ್ಕೆ ನೀಡುವಂತೆ ಪೊಲೀಸರು ಅರ್ಜಿ ಸಲ್ಲಿಸಲಿಲ್ಲ. ಆದಿತ್ಯ ರಾವ್ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶ ಕಿಶೋರ್ ಕುಮಾರ್ ಕೆ.ಎನ್. ಆದೇಶ ಹೊರಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.