ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಧಾನ ವ್ಯವಸ್ಥಾಪಕ (ಕೆಎಎಸ್ ಆಯ್ಕೆಶ್ರೇಣಿ) ಸಿ.ಎನ್. ಮಂಜುನಾಥ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.

ಸಂಘದ ಆಡಳಿತ ಮಂಡಳಿ ಅವಧಿ ಮುಕ್ತಾಯವಾಗಿದೆ. ಚುನಾವಣೆ ನಡೆಸಲು ಚುನಾವಣಾಧಿಕಾರಿ ನೇಮಿಸಲಾಗಿದೆ. ಈಗಾಗಲೇ ಚುನಾವಣಾ ಪ್ರಕ್ರಿಯೆಗಳೂ ಆರಂಭವಾಗಿವೆ. ಹಾಗಾಗಿ, ಆಡಳಿತಾಧಿಕಾರಿ ನೇಮಿಸಲಾಗಿದ್ದು, ಚುನಾವಣಾ ಫಲಿತಾಂಶ ಪ್ರಕಟವಾಗಿ ಹೊಸ ಆಡಳಿತ ಮಂಡಳಿ ನೇಮಕವಾಗುವವರೆಗೂ ಮುಂದುವರಿಯಲಿದ್ದಾರೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಸರ್ಕಾರಿ ನೌಕರರ ಸಂಘದ ಚುನಾವಣಾ ಪ್ರಕ್ರಿಯೆ ಸೆ. 17ರಿಂದ ಆರಂಭವಾಗಿದ್ದು, ತಾಲ್ಲೂಕು ಶಾಖೆಯಿಂದ ಆರಂಭಗೊಂಡು ರಾಜ್ಯ ಸಂಘದ ಅಧ್ಯಕ್ಷರು, ಪದಾಧಿಕಾರಿಗಳವರೆಗಿನ ಚುನಾವಣೆ ಡಿ. 27ರವರೆಗೆ ವಿವಿಧ ಹಂತದಲ್ಲಿ ನಡೆಯಲಿದೆ. ಚುನಾವಣಾಧಿಕಾರಿ ಎ. ಹನುಮನರಸಯ್ಯ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.