ಬೆಂಗಳೂರು: ರಾಜ್ಯ ಅಡ್ವೊಕೇಟ್ ಜನರಲ್ ಹುದ್ದೆಗೆ ಹಿರಿಯ ವಕೀಲರಾದ ಪ್ರಭುಲಿಂಗ ಕೆ. ನಾವದಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಅವರು, ಭಾನುವಾರ ಮಧ್ಯಾಹ್ನ

12.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಎರಡು ಸಾಲಿನ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ಬಿ.ಎಸ್. ಯಡಿಯೂರಪ್ಪ ಅವರು

2018ರಲ್ಲಿ ಮುಖ್ಯಮಂತ್ರಿಯಾದಾಗ ಪ್ರಭುಲಿಂಗ ಕೆ. ನಾವದಗಿ (2018ರ ಮೇ 18) ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. ಯಡಿಯೂರಪ್ಪ ಬಹುಮತ ಸಾಬೀತುಪಡಿಸಲು ವಿಫಲವಾಗಿ ರಾಜೀನಾಮೆ ನೀಡಿದ ಕಾರಣ 2018ರ ಮೇ 31ರಂದು ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ಒಂದು ವರ್ಷದ ಬಳಿಕ 2019ರಲ್ಲಿ ಯಡಿಯೂರಪ್ಪ ಪುನಃ ಮುಖ್ಯಮಂತ್ರಿಯಾದ ನಂತರ ನಾವದಗಿ 2019ರ ಜುಲೈ 30ರಂದು ಅಡ್ವೊಕೇಟ್ ಜನರಲ್ ಆಗಿ ಮತ್ತೆ ನೇಮಕಗೊಂಡಿದ್ದರು.

ನಂತರ ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲೂ ಅಡ್ವೊಕೇಟ್ ಜನರಲ್ ಆಗಿ ಮುಂದುವರಿದಿದ್ದರು.

ರಾಜೀನಾಮೆ ಸಲ್ಲಿಸಿದ ಬಳಿಕ "ಪ್ರಜಾವಾಣಿ"ಗೆ ಪ್ರತಿಕ್ರಿಯಿಸಿದ ಅವರು, "ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ನಾನು ಅಡ್ವೊಕೇಟ್ ಜನರಲ್ ಆಗಿ ನಾಡು, ನುಡಿ, ನೆಲ ಮತ್ತು ಜಲ ಸಂರಕ್ಷಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಹೊಂದಿದ್ದೇನೆ’ ಎಂದರು.

ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧಾರಣೆ ನಿಷೇಧ ಪ್ರಕರಣದಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ನಾವದಗಿ ಅವರು ಪ್ರಬಲ ವಾದ ಮಂಡಿಸಿ ರಾಜ್ಯ ಸರ್ಕಾರ ಜಯಗಳಿಸಲು ಕಾರಣವಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.