ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ಶಿಷ್ಟಾಚಾರದ ಪ್ರಕಾರ ಒದಗಿಸಲಾಗುವ ಜೀರೊ ಟ್ರಾಫಿಕ್ ಸೌಲಭ್ಯವನ್ನು ತ್ಯಜಿಸಿದ್ದ ಸಿದ್ದರಾಮಯ್ಯ ಅವರು ಈಗ ಸಾರ್ವಜನಿಕ ಸನ್ಮಾನದ ರೂಪದಲ್ಲಿ ನೀಡಲಾಗುವ ಹಾರ–ತರಾಯಿ, ಶಲ್ಯಗಳನ್ನೂ ತಿರಸ್ಕರಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ.

‘ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಇದು ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು’ ಎಂದು ಅವರು ತಿಳಿಸಿದ್ದಾರೆ.

ಈ ಮೊದಲು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಜೀರೊ ಟ್ರಾಫಿಕ್ ತ್ಯಜಿಸಿರುವುದಾಗಿ ಹೇಳಿದ್ದರು. ‘ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.