ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಕ, ಉಪನ್ಯಾಸಕರ ನೇಮಕಾತಿ; ವಯೋಮಿತಿ 2 ವರ್ಷ ಸಡಿಲಿಕೆ

Published 8 ಜೂನ್ 2023, 4:13 IST
Last Updated 8 ಜೂನ್ 2023, 4:13 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆ ನೀಡಲಾಗಿದೆ.

ಕೋವಿಡ್‌ ಕಾರಣದಿಂದ ಆರ್ಥಿಕ ಮಿತವ್ಯಯದ ನಿರ್ಬಂಧ ವಿಧಿಸಲಾಗಿತ್ತು. ಹಾಗಾಗಿ, ನೇಮಕಾತಿಗಳು ವಿಳಂಬವಾಗಿದ್ದವು. ಅನುದಾನಿತ ಸಂಸ್ಥೆಗಳಲ್ಲಿ ಅನುದಾನರಹಿತ ಹುದ್ದೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಹಲವು ಆಕಾಂಕ್ಷಿಗಳ ವಯೋಮಿತಿ ಮೀರುತ್ತಿದೆ. ಈ ಎಲ್ಲ ಕಾರಣಗಳಿಂದ ವಯೋಮಿತಿಯ ಸಡಿಲಿಕೆ ನೀಡಲಾಗಿದೆ. ಈ ನಿಯಮ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 788 ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ಭರ್ತಿಗೂ ಅನ್ವಯಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ವಿವರಿಸಿದೆ.

ಸಮಯ ನಿಗದಿಗೆ ಆಕ್ಷೇಪ

ವಯೋಮಿತಿ ಸಡಿಲಿಕೆಯ ಅವಕಾಶವನ್ನು 2022ರ ಜೂನ್‌ 23ರಿಂದ ಒಂದು ವರ್ಷದ ಅವಧಿಗೆ ಅನ್ವಯಿಸಿ ಮಿತಿಗೊಳಿಸಿರುವುದರಿಂದ ಇನ್ನು 15 ದಿನಗಳ ಒಳಗೆ ಅಧಿಸೂಚನೆ ಹೊರಡಿಸುವ ನೇಮಕಾತಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಹೆಚ್ಚಿನ ಪ್ರಯೋಜನವಾಗುವುದಿಲ್ಲ ಎಂದು ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT