ಬೆಂಗಳೂರು: ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸ್‌ಗಳ ಶುಲ್ಕ ಇಳಿಸುವಂತೆ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್ಒ) ಆಗ್ರಹಿಸಿದೆ.

‘ರಾಜ್ಯದಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಶುಲ್ಕದಲ್ಲಿ ಏಕರೂಪತೆ ತರಲು ಉನ್ನತ ಶಿಕ್ಷಣ ಸಮಿತಿಯು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾವನೆ ಇರಿಸಿದೆ. ಈಗಾಗಲೇ ಹಲವು ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ದುಬಾರಿ ಶುಲ್ಕ ವಿಧಿಸಿದ್ದು, ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ಇದು ಹೊರೆಯಾಗಿ ಪರಿಣಮಿಸಿದೆ’ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ತಿಳಿಸಿದ್ದಾರೆ.

‘ರಾಜ್ಯ ಸರ್ಕಾರ, ಬಡ ವಿದ್ಯಾರ್ಥಿಗಳ ದೃಷ್ಟಿಯಿಂದ, ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಹೆಚ್ಚುವರಿ ಅನುದಾನವನ್ನು ನೀಡಿ, ಇಲ್ಲಿನ ಪದವಿ ಕೋರ್ಸ್‌ಗಳಿಗೆ ಸರ್ಕಾರಿ ಪದವಿ ಕಾಲೇಜಿನ ಶುಲ್ಕ ನಿಗದಿಪಡಿಸಬೇಕು. ಸಮಿತಿಯು ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಅನುಮತಿ ಪಡೆದು ಪ್ರತಿವರ್ಷ ಶೇ 10ರಷ್ಟು ಶುಲ್ಕವನ್ನು ಹೆಚ್ಚಿಸುವ ನಿರ್ಧಾರ ಕೈಬಿಡಬೇಕು’ ಎಂದು ಒತ್ತಾಯಿಸಿದ್ದಾರೆ.

‘ಏಕರೂಪ ಶುಲ್ಕ ವಿಧಾನ ತರುವುದೇ ಸರ್ಕಾರದ ಉದ್ದೇಶವಾದರೆ, ಸರ್ಕಾರಿ ಪದವಿ ಕಾಲೇಜುಗಳ ಶುಲ್ಕದ ಪ್ರಮಾಣವನ್ನೇ ಸರ್ಕಾರಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ಗಳಿಗೂ ಅನ್ವಯಿಸಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.