ಉಡುತಡಿ (ಶಿವಮೊಗ್ಗ): 12ನೇ ಶತಮಾನದ ವಚನ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಶಿವಶರಣೆ ಅಕ್ಕಮಹಾದೇವಿಯ 51 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ಆಕೆಯ ಜನ್ಮಸ್ಥಳವಾದ ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ ನಿರ್ಮಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಅನಾವರಣಗೊಳಿಸಲಿದ್ದಾರೆ.

ರಾಜ್ಯ ಸರ್ಕಾರ ₹ 69 ಕೋಟಿ ವೆಚ್ಚದಲ್ಲಿ ಉಡುತಡಿಯ ಪರಿಸರವನ್ನು ದೆಹಲಿಯ ‘ಅಕ್ಷರ ಧಾಮ’ದ ಮಾದರಿಯಲ್ಲಿ ಅಭಿವೃದ್ಧಿಪಡಿಸುತ್ತಿದೆ. ಅಕ್ಕಮಹಾದೇವಿಯ ಪ್ರತಿಮೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಶಿವಮೊಗ್ಗದ ಶಿಲ್ಪಿ ಶ್ರೀಧರಮೂರ್ತಿ ಈ ಪ್ರತಿಮೆಯನ್ನು ಕಾಂಕ್ರೀಟ್ನಿಂದ ರೂಪಿಸಿದ್ದು, ಇಷ್ಟಲಿಂಗ ಹಿಡಿದು ಕುಳಿತಿರುವ ಭಂಗಿಯ ಅಕ್ಕಮಹಾದೇವಿಯ ಪ್ರತಿಮೆ ಕಂಚಿನ ಬಣ್ಣದಲ್ಲಿ ಒಡಮೂಡಿದೆ. ಪ್ರತಿಮೆಯನ್ನು 14 ಅಡಿಯ ಸ್ತಂಭದ ಮೇಲೆ ಪ್ರತಿಷ್ಠಾಪಿಸಲಾಗಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಚನಕಾರ್ತಿ ಅಕ್ಕಮಹಾದೇವಿಯ ದೊಡ್ಡ ಪ್ರಮಾಣದ ಪ್ರತಿಮೆಯನ್ನು ನಿರ್ಮಿಸಲಾಗಿದೆ ಎಂದು ಉಡುತಡಿಯ ಅಕ್ಕಮಹಾದೇವಿ ಸಮಿತಿಯ ಅಧ್ಯಕ್ಷೆ, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ‘ಪ್ರಜಾವಾಣಿ‘ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.