ಬೆಂಗಳೂರು: ‘ನಂದಿನಿ ಬ್ರ್ಯಾಂಡ್ ಹೊರತುಪಡಿಸಿ ಎಲ್ಲ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ತಿರುಪತಿಯಲ್ಲಿ ಲಾಡು ಪ್ರಸಾದ ತಯಾರಿಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿದೆ ಎಂಬ ಆರೋಪದ ಕಾರಣದಿಂದ ಅವರು ಈ ನಿರ್ದೇಶನ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ ಪರೀಕ್ಷಿಸುವ ಬದಲು, ಬಳಸುವ ತುಪ್ಪದ ಪರಿಶೀಲನೆ ಕೈಗೊಳ್ಳುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ’ ಎಂದರು.

‘ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ತುಪ್ಪ ಪೂರೈಕೆ ಆಗುತ್ತಿದೆ. ಈ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ ಪರಿಶೀಲಿಸಲು ಸೂಚಿಸಲಾಗಿದೆ. ತಿರುಪತಿ ಲಾಡು ವಿಚಾರದಲ್ಲಿ ಜನರಲ್ಲಿ ಬಹಳ ಗೊಂದಲ ಆರಂಭವಾಗಿರುವುದು ಆಘಾತಕಾರಿ. ಹೀಗಾಗಿ, ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.