ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸ್ ಇನ್ಸ್ಪೆಕ್ಟರ್ ಇ.ಡಿ.ನಾಗರಾಜ್ ಅವರನ್ನು ಇತ್ತೀಚೆಗೆ ಅಮಾನತು ಮಾಡಲಾಗಿದೆ.

ನಿಗಮದಲ್ಲಿ ನಡೆದಿದ್ದ ಅವ್ಯವಹಾರ ಪ್ರಕರಣದ ಸಂಬಂಧ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಕಲಬುರಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಬಳಿಕ, ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಇ.ಡಿ.ನಾಗರಾಜ್ ಅವರು ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದರು.

‘ಪ್ರಕರಣದ ಆರೋಪಿಗಳಿಂದಲೇ ತನಿಖಾಧಿಕಾರಿ ಲಂಚ ಪಡೆದ ಆರೋಪವಿತ್ತು. ಪ್ರಾಥಮಿಕ ತನಿಖೆ ವೇಳೆ ಹಣ ಪಡೆದಿರುವುದು ಸಾಬೀತಾಗಿದ್ದರಿಂದ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ. ಸಿಐಡಿ ಮುಖ್ಯಸ್ಥ ಎಂ.ಎ.ಸಲೀಂ ಅವರ ಶಿಫಾರಸಿನ ಮೇರೆಗೆ ಅಮಾನತು ಆದೇಶ ಹೊರಡಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.