ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯ ದುರ್ಬಳಕೆ ಮಾಡಿಕೊಂಡ ಆರೋಪ ಆಧರಿಸಿದ ಕ್ರಿಮಿನಲ್ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಪದಾಧಿಕಾರಿಗಳ ವಿರುದ್ಧ ಇಲ್ಲಿನ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

‘ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಪ್ರಕರಣದ 4ನೇ ಆರೋಪಿಯಾದ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಕಟೀಲ್ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ಮತ್ತು ದೂರುದಾರ ಆದರ್ಶ ಅಯ್ಯರ್ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ಇದೇ 22ರವರೆಗೆ ಪ್ರಕರಣದ ತನಿಖೆಗೆ ತಡೆ ನೀಡಿ ಆದೇಶಿಸಿತು.

‘ಜನಾಧಿಕಾರ ಸಂಘರ್ಷ ಪರಿಷತ್’ ಸಹ ಅಧ್ಯಕ್ಷ ಆದರ್ಶ್ ಆರ್.ಐಯ್ಯರ್ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್, ಎಫ್ಐಆರ್ ದಾಖಲಿಸುವಂತೆ ತಿಲಕ್ ನಗರ ಠಾಣೆ ಪೊಲೀಸರಿಗೆ ನಿರ್ದೇಶಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.