ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೈಂಗಿಕ ದೌರ್ಜನ್ಯದ ಆರೋಪ: ರೇವಣ್ಣ, ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌

Published : 28 ಏಪ್ರಿಲ್ 2024, 16:25 IST
Last Updated : 28 ಏಪ್ರಿಲ್ 2024, 16:25 IST
ಫಾಲೋ ಮಾಡಿ
Comments
ರೇವಣ್ಣ

ರೇವಣ್ಣ

ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ
ಜಿ.ಪರಮೇಶ್ವರ
ಜಿ.ಪರಮೇಶ್ವರ
ಪ್ರಜ್ವಲ್‌ ರೇವಣ್ಣ ವಿರುದ್ಧದ ಆರೋಪಗಳ ಕುರಿತು ತನಿಖೆಗೆ ಎಸ್‌ಐಟಿ ರಚಿಸಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುವೆ. ತನಿಖೆ ನಡೆದು ಸತ್ಯ ಹೊರಬರಲಿ
ಜಿ.ಟಿ.ದೇವೇಗೌಡ ಜೆಡಿಎಸ್ ಕೋರ್‌ ಕಮಿಟಿ ಅಧ್ಯಕ್ಷ
ಮಾಂಗಲ್ಯದ ಬಗ್ಗೆ ಮಾತನಾಡುವ ಮೋದಿಯವರು ತಾನು ಆಲಂಗಿಸುವ ಎಚ್‌.ಡಿ.ದೇವೇಗೌಡರ ಮೊಮ್ಮಗ ಸಂಸದ ಪ್ರಜ್ವಲ್‌ ಎಷ್ಟು ಮಹಿಳೆಯರ ತಾಳಿ ಕಿತ್ತಿದ್ದಾರೆ ಎಂದೂ ಹೇಳಬೇಕು
ಕೃಷ್ಣ ಬೈರೇಗೌಡ ಕಂದಾಯ ಸಚಿವ
ಎಫ್‌ಐಆರ್‌ನಲ್ಲಿರುವ ಆರೋಪಗಳೇನು?
ಲೈಂಗಿಕ ಕಿರುಕುಳ (ಐಪಿಸಿ ಸೆಕ್ಷನ್‌ 354 (ಎ)ಮಹಿಳೆಯನ್ನು ಹಿಂಬಾಲಿಸುವುದು (ಐಪಿಸಿ– 354 (ಡಿ)ಜೀವ ಬೆದರಿಕೆ (ಐಪಿಸಿ 506)ಮಹಿಳೆಯ ಮಾನಹಾನಿ (ಐಪಿಸಿ 509)
ತನಿಖೆ ಆರಂಭಿಸಿದ ಎಸ್‌ಐಟಿ
ಗೃಹ ಇಲಾಖೆ ಆದೇಶ ಹೊರಡಿಸಿದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ವಿರುದ್ಧದ ಆರೋಪಗಳ ಕುರಿತು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಹಿರಿಯ ಅಧಿಕಾರಿಗಳ ತಂಡವೊಂದು ಭಾನುವಾರವೇ ಹಾಸನ ಜಿಲ್ಲೆಗೆ ತೆರಳಿದೆ. ಸಿಐಡಿಯ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ.ಸಿಂಗ್‌ ಅವರನ್ನು ಎಸ್‌ಐಟಿಯ ಮುಖ್ಯಸ್ಥರಾಗಿ ನೇಮಿಸಲಾಗಿದೆ. ಅವರೊಂದಿಗೆ ಡಿಜಿಪಿ ಕಚೇರಿಯಲ್ಲಿ ಸಹಾಯಕ ಐಜಿಪಿ ಆಗಿರುವ ಐಪಿಎಸ್‌ ಅಧಿಕಾರಿ ಸುಮನ್‌ ಡಿ.ಪೆನ್ನೇಕರ್‌ ಮತ್ತು ಮೈಸೂರು ಎಸ್‌.ಪಿ ಆಗಿರುವ ಸೀಮಾ ಲಾಠ್ಕರ್‌ ಅವರನ್ನು ಸದಸ್ಯೆಯರನ್ನಾಗಿ ನೇಮಿಸಲಾಗಿದೆ. ‘ಸಿಐಡಿ ಪೊಲೀಸ್‌ ಮಹಾನಿರ್ದೇಶಕರ ಮೇಲ್ವಿಚಾರಣೆಯಲ್ಲಿಯೇ ಎಸ್‌ಐಟಿ ಕಾರ್ಯನಿರ್ವಹಿಸಲಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತಂಡಕ್ಕೆ ಅಗತ್ಯವಿರುವ ಅಧಿಕಾರಿಗಳು ಸಿಬ್ಬಂದಿಯನ್ನು ಪೊಲೀಸ್‌ ಮಹಾನಿರ್ದೇಶಕರ ಅನುಮೋದನೆಯೊಂದಿಗೆ ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಲೈಂಗಿಕ ದೌರ್ಜನ್ಯ ಕುರಿತು ರಾಜ್ಯದ ಯಾವುದೇ ಠಾಣೆಯಲ್ಲಿ ದಾಖಲಾಗಿರುವ ಅಥವಾ ದಾಖಲಾಗಬಹುದಾದ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಸಲು ಆದೇಶಿಸಲಾಗಿದೆ. ‘ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ದೂರುದಾರರಾದ ಸಂತ್ರಸ್ತೆಯ ಹೇಳಿಕೆಯನ್ನು ಶೀಘ್ರದಲ್ಲಿ ದಾಖಲಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ. ವಿಡಿಯೊ ತುಣುಕುಗಳ ನೈಜತೆ ಪರೀಕ್ಷೆಗೂ ತಯಾರಿ ನಡೆದಿದೆ’ ಎಂದು ಮೂಲಗಳು ತಿಳಿಸಿವೆ.
‘ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ’ 
ಬೆಂಗಳೂರು: ‘ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳ ಕುರಿತ ತನಿಖೆಯನ್ನು ಎಸ್‌ಐಟಿಗೆ ಒಪ್ಪಿಸಿದ್ದೇವೆ. ನಾವು ಒಮ್ಮೆ ಎಸ್‌ಐಟಿಗೆ ವಹಿಸಿದರೆ ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆಯೋ ಅದು ಅವರಿಗೆ ಬಿಟ್ಟಿದ್ದು. ನಾವು ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದರೆ ಎಸ್‌ಐಟಿ ತಂಡವೇ ಕರೆದುಕೊಂಡು ಬಂದು ತನಿಖೆ ನಡೆಸಲಿದೆ’ ಎಂದರು. ‘ಸಂತ್ರಸ್ತ ಮಹಿಳೆಯರು ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ನಿಮ್ಮನ್ನು ಸಂಪರ್ಕಿಸಿದ್ದಾರಾ’ ಎಂಬ ಪ್ರಶ್ನೆಗೆ ಪರಮೇಶ್ವರ ‘ಚುನಾವಣೆಯಲ್ಲಿ ಕಾರ್ಯನಿರತನಾಗಿರುವುದರಿಂದ ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಆದರೆ ಮುಖ್ಯಮಂತ್ರಿ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ಮಹಿಳಾ ಆಯೋಗದವರು ಪತ್ರ ಬರೆದಿದ್ದಾರೆ. ಅದರ ಆಧಾರದಲ್ಲಿ ತನಿಖೆಗೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ’ ಎಂದರು.
‘ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು’
ಬೆಂಗಳೂರು: ‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಭಾನುವಾರ ಹೇಳಿದರು. ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಕುರಿತ ಸುದ್ದಿಗಾರರಿಗೆ ಪ್ರಶ್ನೆಗೆ ‘ಈ ಕುರಿತು ತನಿಖೆಗೆ ಮುಖ್ಯಮಂತ್ರಿಯವರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದು ಗಮನಕ್ಕೆ ಬಂದಿದೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳಲಿ. ಸತ್ಯಾಂಶ ಏನು ಎಂಬುದು ಹೊರಬರಲಿ’ ಎಂದರು. ‘ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ತಪ್ಪು ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ನಾನಾಗಲೀ ಎಚ್‌.ಡಿ. ದೇವೇಗೌಡರಾಗಲೀ ಸಂಕಷ್ಟ ಹೇಳಿಕೊಂಡು ಬಂದ ಮಹಿಳೆಯರನ್ನು ಗೌರವದಿಂದ ನಡೆಸಿಕೊಂಡಿದ್ದೇವೆ. ಮಹಿಳೆಯರ ಬಗ್ಗೆ ಸದಾ ಗೌರವದ ಭಾವನೆ ಹೊಂದಿದ್ದೇವೆ’ ಎಂದು ಹೇಳಿದರು. ಪ್ರಜ್ವಲ್‌ ವಿದೇಶಕ್ಕೆ ಪರಾರಿಯಾದ ಕುರಿತು ಪ್ರಶ್ನಿಸಿದಾಗ ‘ಪ್ರಜ್ವಲ್‌ ವಿದೇಶಕ್ಕೆ ಹೋಗಿದ್ದರೆ ಅದಕ್ಕೂ ನನಗೂ ಸಂಬಂಧ ಇಲ್ಲ. ಅವರು ತಪ್ಪಿಸಿಕೊಂಡಿದ್ದರೆ ಎಸ್‌ಐಟಿ ಅಧಿಕಾರಿಗಳು ಪತ್ತೆಹಚ್ಚಿ ಕರೆತರಲಿ. ಅದಕಾಗಿಯೇ ನೇಮಿಸಿರುವ ಅಧಿಕಾರಿಗಳಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT