ಬೆಂಗಳೂರು:ಕಂಠೀರವ ಸ್ಟುಡಿಯೊದಲ್ಲಿರುವ ಹಿರಿಯ ನಟ ಡಾ.ರಾಜ್ಕುಮಾರ್ ಅವರ ಸಮಾಧಿ ಬಳಿ ಅಂಬರೀಷ್ ಅವರ ಅಂತ್ಯಕ್ರಿಯೆ ನಡೆಸಲಾಗುವುದು. ಮತ್ತು ಅಲ್ಲಿಯೇ ಅವರ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ಈ ಸಂಬಂಧ ಕುಮಾರಸ್ವಾಮಿ ಅವರು ಅಂತ್ಯಕ್ರಿಯೆ ನಡೆಯಲಿರುವ ಸ್ಟುಡಿಯೊ ಆವರಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಡಾ.ರಾಜ್ಕುಮಾರ್ ಸಮಾಧಿಯ ಸಮೀಪದಲ್ಲಿ ಅಂತ್ಯಕ್ರಿಯೆ ನಡೆಸಲು ನಿಗದಿ ಪಡಿಸಿದ ಸ್ಥಳ ಪರಿಶೀಲನೆ ನಡೆಸಿ ಪೂರ್ವಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸ್ಥಳೀಯ ಶಾಸಕ ಗೋಪಾಲಯ್ಯ, ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಮತ್ತಿತರರು ಹಾಜರಿದ್ದರು.

ಸರ್ಕಾರದಿಂದ ಸ್ಮಾರಕ: ಸಿಎಂ
ಜನರ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಾಗೂ ಅವರ ಬಗ್ಗೆ ಜನರು ಹೊಂದಿರುವ ಗೌರವಾರ್ಥವಾಗಿ ಸರ್ಕಾರ ಒಂದೂವರೆ ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಿಸಲಿದೆ. ಆದ್ದರಿಂದ, ಮಂಡ್ಯಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯದ್ದ ವೇಳೆ ಅಲ್ಲಿಯೇ ಅಂತ್ಯ ಸಂಸ್ಕಾರ ನಡೆಸಬೇಕು ಎಂದು ಪಟ್ಟು ಹಿಡಿಯಬಾರದು ಎಂದು ಸಿಎಂ ಮನವಿ ಮಾಡಿದರು.

ಜನರ ಭಾವನೆಗಳಿಗೆ ಮಣಿದು ಸರ್ಕಾರ ಪಾರ್ಥಿವ ಶರೀರವನ್ನು ಅಲ್ಲಿಗೆ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ಆದ್ದರಿಂದ, ಜನರು ಸಹಕಾರ ನೀಡಬೇಕು ಎಂದು ಸಿಎಂ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನ ಪಡೆದ ವೇಳೆ ಹೇಳಿದರು.

ಇವನ್ನೂ ಓದಿ...

*ನಟ ಅಂಬರೀಷ್ ನಿಧನ

*ಅಂಬಿಗೆ ನಿಜಕ್ಕೂ ವಯಸ್ಸಾಯ್ತಾ?ಅಭಿಮಾನಿಗಳಿಗೆ ಅಂಬರೀಷ್ ಬರೆದಿದ್ದ ಪತ್ರ

*‘ಕಾವೇರಿ’ಗಾಗಿ ರಾಜೀನಾಮೆ ಕೊಟ್ಟಿದ್ದ ಮಂಡ್ಯದ ಗಂಡು

*ಗೆಳೆಯನ ಸಾವು; ಕಂಬನಿ ಮಿಡಿದ ರಜನಿಕಾಂತ್

*ಗ್ಲ್ಯಾಮರ್–ಗ್ರ್ಯಾಮರ್ ಸೂತ್ರ ಸಿನಿಮಾ-ರಾಜಕಾರಣದ ಪಾತ್ರ

*'ಸಿಗರೇಟ್ ಬಿಟ್ರೆ ಎರಡು ದಿನ ಹೆಚ್ಚು ಬದುಕ್ತೀನಿ ಅಷ್ಟೆ..!'

*ರಾಜಕೀಯದಲ್ಲೂ ‘ರೆಬೆಲ್’

*ಅಂಬರೀಷ್: ನಟನಷ್ಟೇ ಅಲ್ಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.