ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ಗಳ ‘ಸೀಟ್ ಬ್ಲಾಕಿಂಗ್’ ದಂಧೆಗೆ ಕಡಿವಾಣ ಹಾಕಲು ಮುಂದಾಗಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಖಾಸಗಿ ಕಾಲೇಜು ಸಂಘಟನೆಗಳೊಂದಿಗೆ ಮಾಡಿಕೊಂಡ ಒಪ್ಪಂದದಲ್ಲಿ ಎರಡು ತಿದ್ದುಪಡಿಗಳನ್ನು ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ವರದಿ ಸಲ್ಲಿಸಿರುವ ಪ್ರಾಧಿಕಾರ, ಖಾಲಿ ಇರುವ ಸರ್ಕಾರಿ ಕೋಟಾದ ಎಲ್ಲ ಸೀಟುಗಳನ್ನು ಕೆಇಎ ಮೂಲಕವೇ ಭರ್ತಿ ಮಾಡಬೇಕು. ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆಯ ನಂತರವೇ ಕಾಮೆಡ್-ಕೆ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಬೇಕು ಎನ್ನುವ ಎರಡು ಷರತ್ತುಗಳನ್ನು ಒಪ್ಪಂದದಲ್ಲಿ ಸೇರಿಸಬೇಕು ಎಂದು ಮನವಿ ಮಾಡಿದೆ.

ರಾಜ್ಯ ಸರ್ಕಾರ ಮತ್ತು ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘದ ನಡುವಿನ ಒಮ್ಮತದ ಒಪ್ಪಂದದ ಪ್ರಕಾರ, ಸಿಇಟಿ ಮೂಲಕ ಎಲ್ಲ ಸುತ್ತಿನ ಹಂಚಿಕೆಯ ನಂತರ ಉಳಿದ ಸೀಟುಗಳು ಹಾಗೂ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ನಂತರ ಪ್ರವೇಶ ಪಡೆಯದ ಸೀಟುಗಳನ್ನು ಆಡಳಿತ ಮಂಡಳಿ ಕೋಟಾದ ಮೂಲಕ ಭರ್ತಿ ಮಾಡಿಕೊಳ್ಳಬಹುದು. ಇದು ಸಿಟ್ ಬ್ಲಾಕಿಂಗ್ ದಂದೆಯ ಮೂಲ ಎನ್ನುವುದು ಕೆಇಎ ವಾದ.

ಬೇಡಿಕೆ ಇರುವ ಕೃತಕ ಬುದ್ಧಿಮತ್ತೆ, ಕಂಪ್ಯೂಟರ್ ಸೈನ್ಸ್ ಮೊದಲಾದ ಕೋರ್ಸ್ಗಳಿಗೆ ಆಡಳಿತ ಮಂಡಳಿಗಳು ಒಂದು ಸೀಟಿಗೆ ₹60 ಲಕ್ಷದವರೆಗೂ ಶುಲ್ಕ ವಸೂಲಿ ಮಾಡುತ್ತಿವೆ. ಹಾಗಾಗಿ, ಬೇಡಿಕೆ ಇರುವ ಕೋರ್ಸ್ಗಳಿಗೆ ಸಿಇಟಿ ವಿದ್ಯಾರ್ಥಿಗಳು ಪ್ರವೇಶ ಪಡೆಯದಂತೆ ತಂತ್ರ ಮಾಡುತ್ತಿವೆ. ಪ್ರಸಕ್ತ ವರ್ಷ ಅಂತಹ ಎರಡು ಸಾವಿರಕ್ಕೂ ಹೆಚ್ಚು ಸೀಟುಗಳು ಉಳಿದಿದ್ದವು.

ಸೀಟು ಹಂಚಿಕೆಯಾದರೂ ಪ್ರವೇಶ ಪಡೆಯದ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿತ್ತು.‘ಸೀಟ್ ಬ್ಲಾಕಿಂಗ್’ ದಂಧೆ ನಡೆಸುತ್ತಿದ್ದವರ ವಿರುದ್ಧ ಮಲ್ಲೇಶ್ವರದ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ(ಸೈಬರ್)ಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.