ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಕ್ಕಲಿಗರ ಸಂಘದ ಬೈ–ಲಾಗೆ ತಿದ್ದುಪಡಿ: ಆರ್. ಪ್ರಕಾಶ್

Published : 3 ಅಕ್ಟೋಬರ್ 2024, 20:00 IST
Last Updated : 3 ಅಕ್ಟೋಬರ್ 2024, 20:00 IST
ಫಾಲೋ ಮಾಡಿ
Comments

ಬೆಂಗಳೂರು: ‘ಪದಾಧಿಕಾರಿಗಳ ವಿರುದ್ಧ ಪದೇಪದೇ ಅವಿಶ್ವಾಸ ನಿರ್ಣಯ ಮಂಡಿಸುವುದನ್ನು ತಪ್ಪಿಸುವ ಸಲುವಾಗಿ ಸಂಘದ ಬೈ–ಲಾಗೆ ತಿದ್ದುಪಡಿ ತರಲು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಆರ್. ಪ್ರಕಾಶ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂತನ ಪದಾಧಿಕಾರಿಗಳು ಆಯ್ಕೆಯಾದ 15 ದಿನಗಳಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಲಾಗಿತ್ತು. ‘ಪದಾಧಿಕಾರಿಗಳು ಆಯ್ಕೆಯಾಗಿ ಒಂದು ವರ್ಷದವರೆಗೆ ಅವಿಶ್ವಾಸ ನಿರ್ಣಯ ಮಂಡಿಸುವಂತಿಲ್ಲ ಎಂದು ನಿಯಮಗಳಿಗೆ ತಿದ್ದುಪಡಿ ತರುವುದು ಸೂಕ್ತ ಎಂದು ಹೈಕೋರ್ಟ್‌ ಹೇಳಿತ್ತು’ ಎಂದರು.

‘ಹೈಕೋರ್ಟ್‌ನ ಸೂಚನೆಯಂತೆ ಬೈ–ಲಾಗೆ ತಿದ್ದುಪಡಿ ತರಲಾಗುತ್ತದೆ. ಕೆಲವರ ಅಸಹಕಾರದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿಲ್ಲ. ಹೀಗಾಗಿ ಎಲ್ಲರೂ ಸಹಕಾರ ನೀಡಬೇಕು’ ಎಂದು ಅವರು ಕೋರಿದರು.

ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT