ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ಮೂರು ಜಿಲ್ಲೆಗೆ ‘ಆರೆಂಜ್ ಅಲರ್ಟ್‌’ ಘೋಷಣೆ

Published : 7 ಅಕ್ಟೋಬರ್ 2024, 15:40 IST
Last Updated : 7 ಅಕ್ಟೋಬರ್ 2024, 15:40 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗೆ ‘ಆರೆಂಜ್ ಅಲರ್ಟ್‌’ ಹಾಗೂ ಮೈಸೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ) 11 ಸೆಂ.ಮೀ, ನಾಪೋಕ್ಲು (ಕೊಡಗು ಜಿಲ್ಲೆ) 9 ಸೆಂ.ಮೀ. ಮಳೆ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT