ಬೆಂಗಳೂರು: ‘ನಾವು ತೆರಿಗೆ ಪಾವತಿಯಿಂದ ವಿನಾಯಿತಿ ಹೊಂದಿದ್ದೇವೆ ಎಂಬುದನ್ನು ಋಜುವಾತು ಪಡಿಸುವ ಶಾಲೆಗಳ ಮಾನ್ಯತಾ ನವೀಕರಣ ಅರ್ಜಿಗಳನ್ನು ಪರಿಗಣಿಸಿ’ ಎಂದು ಹೈಕೋರ್ಟ್ ಶಿಕ್ಷಣ ಇಲಾಖೆಗೆ ನಿರ್ದೇಶಿಸಿದೆ.

‘ಶಾಲೆಗಳ ಮಾನ್ಯತಾ ನವೀಕರಣಕ್ಕೆ ಷರತ್ತುಗಳನ್ನು ವಿಧಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು 2024ರ ಜುಲೈ 24ರಂದು ಹೊರಡಿಸಿರುವ ಸುತ್ತೋಲೆ ರದ್ದುಪಡಿಸಬೇಕು’ ಎಂದು ಕೋರಿ ‘ಕೃಪಾ’ ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಘದ ಅಧ್ಯಕ್ಷ ಎಸ್.ಲೋಕೇಶ್ವರಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಿದೆ.

ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಪ್ರತಿವಾದಿಗಳಾದ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿದರು.

‘ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಕಲಂ 36 ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಾನ್ಯತೆ) ನಿಯಮಗಳು-1999ರ ನಿಯಮ 3ರ ಅನ್ವಯ ಶಾಲೆಗಳ ಮಾನ್ಯತಾ ನವೀಕರಣಕ್ಕೆ ಆಡಳಿತ ಮಂಡಳಿಗಳು ಪ್ರತಿ ವರ್ಷ ಅರ್ಜಿ ಸಲ್ಲಿಸಬೇಕು ಎಂಬುದೂ ಸೇರಿದಂತೆ ತೆರಿಗೆ ಪಾವತಿ, ನಿವೇಶನ ಪತ್ರ, ಖಾತಾ ಪತ್ರ ಹಾಗೂ ಕಂದಾಯ ರಸೀದಿ ಸಲ್ಲಿಸಬೇಕು’ ಎಂದು ಷರತ್ತುಗಳನ್ನು ವಿಧಿಸಿ ಶಾಲಾ ಶಿಕ್ಷಣ ಇಲಾಖೆಯು 2024ರ ಜುಲೈ 24ರಂದು ಸುತ್ತೋಲೆ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.