ಬೆಂಗಳೂರು: ‘ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 1,924 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಶಶೀಲ್ ಜಿ. ನಮೋಶಿ, ಪುಟ್ಟಣ್ಣ ಮತ್ತು ಅರುಣ ಶಹಾಪುರ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ‘2015ರ ಡಿಸೆಂಬರ್ 31ರವರೆಗೆ ಅನುದಾನಿತ ಪ್ರೌಢಶಾಲೆಗಳಲ್ಲಿ 3,689 ಹುದ್ದೆಗಳು ಖಾಲಿ ಉಳಿದಿದ್ದವು. ಇವುಗಳಲ್ಲಿ 3,633 ಹುದ್ದೆಗಳನ್ನು ಭರ್ತಿ ಮಾಡಲು ಸಹಮತಿ ಸೂಚಿಸಲಾಗಿತ್ತು. ಆದರೆ, 1,452 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ಉಳಿದಂತೆ 2,181 ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ’ ಎಂದು ವಿವರಿಸಿದರು.

‘ಪ್ರಸ್ತುತ ಆರ್ಥಿಕ ಮಿತವ್ಯಯ ಆದೇಶ ಜಾರಿಯಲ್ಲಿರುವುದರಿಂದ 1,924 ಖಾಲಿ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲು ಆರ್ಥಿಕ ಇಲಾಖೆಯ ಒಪ್ಪಿಗೆ ಕೋರಿ ಮತ್ತೊಮ್ಮೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.

‘ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಉಳಿದಿದ್ದ 998 ಹುದ್ದೆಗಳಲ್ಲಿ 323 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉಳಿದಂತೆ ಖಾಲಿ ಇರುವ 675 ಹುದ್ದೆಗಳ ಪೈಕಿ 436 ಹುದ್ದೆಗಳಿಗೆ ಆಡಳಿತ ಮಂಡಳಿಗಳು ಇದುವರೆಗೆ ಪ್ರಸ್ತಾವಗಳನ್ನು ಸಲ್ಲಿಸಿಲ್ಲ’ ಎಂದು ಮಾಹಿತಿ ನೀಡಿದರು.

‘ನಿರ್ದೇಶನಾಲಯದ ಹಂತದಲ್ಲಿ 239 ಹುದ್ದೆಗಳಿಗೆ ಭರ್ತಿ ಮಾಡುವ ಪ್ರಸ್ತಾವಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.