ಬೆಂಗಳೂರು: ಶಬ್ದ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯದಾದ್ಯಂತ ಯಾವುದೇ ತಾರತಮ್ಯ ಇಲ್ಲದೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ಆದೇಶದಂತೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ಅನುಷ್ಠಾನಕ್ಕೆ ಹೊಸ ಸುತ್ತೋಲೆಯನ್ನು ಹೊರಡಿಸಲಾಗಿದೆ. ಮಸೀದಿ, ಚರ್ಚ್, ದೇವಸ್ಥಾನ ಸೇರಿದಂತೆ ಯಾವುದೇ ಸ್ಥಳದಲ್ಲಿ ಧ್ವನಿವರ್ಧಕ ಬಳಕೆಯಲ್ಲಿ ನಿಯಮ ಉಲ್ಲಂಘನೆ ಅದರೂ ಕ್ರಮ ಕೈಗೊಳ್ಳಲಾಗುವುದು’ಎಂದರು.

ಓದಿ...ರಾಜ್ಯದಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯ

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಯಾವ ಪ್ರದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಧ್ವನಿವರ್ಧಕ ಬಳಸಬಹುದು ಎಂಬ ಮಿತಿಯನ್ನೂ ಸ್ಪಷ್ಟಪಡಿಸಲಾಗಿದೆ. ಖಾಸಗಿ ಸ್ಥಳಗಳಲ್ಲೂ ಈ ನಿರ್ಬಂಧ ಅನ್ವಯವಾಗುತ್ತದೆ ಎಂದು ಹೇಳಿದರು.

ನಿಯಮ ಉಲ್ಲಂಘಿಸುವ ಮತ್ತು ಅನುಮತಿ ಇಲ್ಲದ ಧ್ವನಿವರ್ಧಕಗಳನ್ನು ತೆರವು ಮಾಡುವ ಕಾರ್ಯಾಚರಣೆ ರಾಜ್ಯದಾದ್ಯಂತ ನಡೆಯಲಿದೆ. ಇದಕ್ಕಾಗಿ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದರು.

ಓದಿ...ಸದ್ಯಕ್ಕೆ ದೇಶದ್ರೋಹ ಪ್ರಕರಣ ದಾಖಲಿಸಬೇಡಿ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.