ರಾಯಚೂರು: ಬಾಂಗ್ಲಾದಿಂದ ವಲಸೆ ಬಂದವರಿಗೆ ಅನ್ಯ ರಾಜ್ಯಗಳಲ್ಲಿ ಆಶ್ರಯ ನೀಡದೇ ಪಶ್ಚಿಮ ಬಂಗಾಳದಲ್ಲೇ ಇರುವಂತೆ ನಿಯಂತ್ರಿಸಬೇಕಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಿದ್ದ ಸುಧಾಮಹಾಮಂಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಪೌರತ್ವ ಕಾಯ್ದೆ ಜಾರಿಗೆ ಬಂದಿರುವುದು ಅಕ್ರಮ ವಲಸಿಗರನ್ನು ಹೊರಹಾಕುವ ಉದ್ದೇಶಕ್ಕಾಗಿ. ಅನೇಕ ವರ್ಷಗಳಿಂದ ದೇಶದ ವಿವಿಧೆಡೆ ವಾಸಿಸುತ್ತಿರುವ ಬಾಂಗ್ಲಾ ವಲಸಿಗರಿಗೆ ನೂತನ ಕಾಯ್ದೆ ಅನುಕೂಲ ಮಾಡಿಕೊಟ್ಟಿದೆ. ಮುಸ್ಲಿಮರನ್ನು ಹೊರಹಾಕಲಾಗುತ್ತಿದೆ ಎನ್ನುವ ಆತಂಕವನ್ನು ಹರಡುತ್ತಿರುವುದು ಸರಿಯಲ್ಲ ಎಂದರು.

ಈಶಾನ್ಯ ರಾಜ್ಯಗಳ ಕೆಲವು ನಿವಾಸಿಗಳ ಅಸ್ತಿತ್ವಕ್ಕೆ ಧಕ್ಕೆ ಬರುವ ಆತಂಕವಿದ್ದು, ಅದಕ್ಕಾಗಿ ಅಲ್ಲಿ ಹೋರಾಟ ನಡೆಯುತ್ತಿದೆ. ಕೇಂದ್ರವು ಸೇನೆ ಬಳಸಿ ಪರಿಸ್ಥಿತಿ ನಿಯಂತ್ರಿಸುವ ಬದಲು ಮನವರಿಕೆ ಮಾಡಿಕೊಟ್ಟು ಶಾಂತಿ ಪಾಲಿಸಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.