ಬೆಂಗಳೂರು: ಬಿಜೆಪಿ– ಜೆಡಿಎಸ್ ಮೈತ್ರಿ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅವರ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಎಂದು ಬಿಜೆಪಿ ಶಾಸಕ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ವರಿಷ್ಠರ ಮಟ್ಟದಲ್ಲಿ ಮೈತ್ರಿಯಾದ ನಂತರ ಇತರೆ ನಾಯಕರು, ಶಾಸಕರು, ಕಾರ್ಯಕರ್ತರು ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸುವುದು, ಹೇಳಿಕೆ ನೀಡುವುದು ಸರಿಯಲ್ಲ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದರು.

20 ವರ್ಷಗಳಿಂದ ಜೆಡಿಎಸ್ ವಿರುದ್ಧ ಸೆಣಸಿಕೊಂಡು ಬಂದಿರಬಹುದು. ಹಾಗಂತ ಮಾಧ್ಯಮಗಳಲ್ಲಿ, ಸಾರ್ವಜನಿಕವಾಗಿ ಹೇಳಿಕೆ ನೀಡುವುದು ಸರಿಯಲ್ಲ. ಪಕ್ಷ ನೀಡಿದ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳಬಾರದು. ಯಾವುದೇ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಮಾತುಕತೆ ಮೂಲಕ ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಾಸಕ ಆರ್.ಅಶೋಕ, ‘ಯಶವಂತಪುರ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರಿಗೆ ಜೆಡಿಎಸ್ ಬಗ್ಗೆ ಕೋಪ ಇರಬಹುದು. ಅದಕ್ಕೆ ಆ ರೀತಿ ಮಾತನಾಡಿರುವ ಸಾಧ್ಯತೆ ಇದೆ. ಅವರ ಜತೆ ಮಾತನಾಡುವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.