ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡ ಥೀಮ್ಪಾರ್ಕ್ ನಿರ್ಮಾಣ ಯೋಜನೆ ಸ್ಥಗಿತಗೊಂಡಿದ್ದು, ತಕ್ಷಣವೇ ಕಾಮಗಾರಿಯನ್ನು ಆರಂಭಿಸಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

‘ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಪ್ರೇರಣೆಯಾಗಿ ಪಡೆದು ಕರುನಾಡನ್ನು ಪ್ರಗತಿಯತ್ತ ಕೊಂಡೊಯ್ಯಬೇಕು ಎನ್ನುವ ಸದುದ್ದೇಶದಿಂದ ಕೆಂಪೇಗೌಡ ಪ್ರತಿಮೆ ಸ್ಥಾಪಿಸಲಾಯಿತು. ಅವರ ದೂರದೃಷ್ಟಿ ಪ್ರತಿಬಿಂಬಿಸುವ ಥೀಮ್ ಪಾರ್ಕ್ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅದನ್ನು ಸ್ಥಗಿತಗೊಳಿರುವುದು ಬೇಸರದ ಸಂಗತಿ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.