ಬೆಂಗಳೂರು: ಐತಿಹಾಸಿಕ ‘ಬೆಂಗಳೂರು ಕಂಬಳ ನಮ್ಮ ಕಂಬಳ’ಕ್ಕೆ ಇಂದು (ಶನಿವಾರ) ಅಧಿಕೃತ ಚಾಲನೆ ಸಿಕ್ಕಿದೆ.

ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ದೀಪ ಬೆಳಗಿಸಿ ಕಂಬಳಕ್ಕೆ ಚಾಲನೆ ನೀಡಿದರು. ಬಳಿಕ ಗಂಗಾರತಿ ಮಾಡುವ ಮೂಲಕ ಕಂಬಳ ಕರೆಗೆ ಪೂಜೆ ಸಲ್ಲಿಸಲಾಯಿತು.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಡಿ.ವಿ ಸದಾನಂದಗೌಡ, ಸಂಗೀತ ನಿರ್ದೇಶಕ ಗುರುಕಿರಣ್, ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ, ಶಾಸಕ ಗುರ್ಮೆ ಪ್ರಕಾಶ್ ಶೆಟ್ಟಿ ಸೇರಿದಂತೆ ಅನೇಕರು ಗಂಗಾರತಿಯಲ್ಲಿ ಭಾಗವಹಿಸಿದ್ದರು.

ಇದೇ ವೇಳೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
.Bengaluru Kambala: ಫಲಿತಾಂಶ ನಿರ್ಧಾರಕ್ಕೆ ಲೇಸರ್ ಸಿಸ್ಟಂ.Bengaluru Kambala: ಬೆಂಗಳೂರಿನಲ್ಲಿ ‘ಕರಾವಳಿ ಉತ್ಸವ‘: ಕಂಬಳದ ವಿಶೇಷಗಳು ಹಲವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.