ಬೆಂಗಳೂರು: ‘ರಾಜ್ಯದ ವಿವಿಧ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮ ನಡೆದಿದ್ದು, ಈ ಬಗ್ಗೆ ವಿಸ್ತೃತತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ಹಾಗೂ ಇತರರು ಮಲ್ಲೇಶ್ವರ ಠಾಣೆಗೆ ಶನಿವಾರ ದೂರು ನೀಡಿದ್ದಾರೆ.

‘ಅರ್ಥಶಾಸ್ತ್ರ, ಸಮಾಜಶಾಸ್ತ್ರ ಹಾಗೂ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲೂ ಅಕ್ರಮನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಒಎಂಆರ್ ತಿದ್ದಿ ಅಕ್ರಮವಾಗಿ ಹುದ್ದೆಗೆ ಆಯ್ಕೆ ಮಾಡುವುದಕ್ಕಾಗಿ 600 ಅಭ್ಯರ್ಥಿಗಳಿಂದ ತಲಾ ₹ 35 ಲಕ್ಷದಿಂದ ₹ 75 ಲಕ್ಷ ಸಂಗ್ರಹಿಸಿರುವ ಮಾತುಗಳು ಕೇಳಿಬರುತ್ತಿವೆ.’

‘ಪರೀಕ್ಷೆ ಅಕ್ರಮದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್, ಕೆಎಸ್‌ಒಯು ಕುಲಸಚಿವ ರಾಜಣ್ಣ, ನಿವೃತ್ತ ಪ್ರಾಧ್ಯಾಪಕ ಶಿವಲಿಂಗಯ್ಯ, ಪ್ರಾಧ್ಯಾಪಕ ಅಪ್ಪಾಜಿಗೌಡ ಹಾಗೂ ಇತರರನ್ನು ವಿಚಾರಣೆ ಮಾಡಬೇಕು. ನಿಜಾಂಶವನ್ನು ಪತ್ತೆ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದೂ ದೂರಿನಲ್ಲಿ ಆಗ್ರಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.