ಬೆಂಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತ್ತೆ ಸ್ಪರ್ಧಿಸುವುದು ಖಚಿತ. ಕಾಂಗ್ರೆಸ್ ಪಕ್ಷ ಆಹ್ವಾನ ನೀಡಿದರೆ ಸ್ವೀಕರಿಸುವೆ ಎಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು.

ಆಯನೂರು ಮಂಜುನಾಥ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಶಿವಮೊಗ್ಗದ ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ (ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿ ಸೋತವರು) ಬರೆದ ಪತ್ರಕ್ಕೆ ಅವರು ಪ್ರತಿಕ್ರಿಯೆ ನೀಡಿದರು.

‘ನೈರುತ್ಯ ಪದವೀಧರ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಪಡೆದಿದ್ದ ನಾನು ಈ ಬಾರಿಯೂ ಕಣಕ್ಕೆ ಇಳಿಯಲು ಈಗಾಗಲೇ ಸಿದ್ಧತೆ ನಡೆಸಿದ್ದೇನೆ. ಆದರೆ, ಟಿಕೆಟ್ ಬಯಸಿ ಕಾಂಗ್ರೆಸ್ನ ಮುಖಂಡರನ್ನು ಭೇಟಿ ಮಾಡಿಲ್ಲ. ಯೋಗೇಶ್ ಅವರ ಪತ್ರ ಆಶ್ಚರ್ಯ ತಂದಿದೆ’ ಎಂದರು.

ವಿಧಾನ ಪರಿಷತ್ನ ಬಿಜೆಪಿ ಸದಸ್ದಯರಾಗಿದ್ದ ಆಯನೂರು ಮಂಜುನಾಥ್ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿದ್ದರು. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸೋತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.