ಬೆಂಗಳೂರು: ವಿವಾದಿತ ಬಾಬ್ರಿ ಮಸೀದಿ ಮತ್ತು ರಾಮ ಜನ್ಮಭೂಮಿ ತೀರ್ಪು ಹೊರಬರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಸಾಮಾಜಿಕ ಜಾಲತಾಣ ಬಳಕೆದಾರರಿಗೆ ನೀಡಿದ ಸೂಚನೆ ಇಲ್ಲಿದೆ.

*ರಾಮ ಜನ್ಮಭೂಮಿ ಮತ್ತು ಬಾಬ್ರೀ ಮಸೀದಿ ವಿವಾದದ ಕುರಿತು ಸರ್ವೋಚ್ಛ ನ್ಯಾಯಾಲಯ ತೀರ್ಪ ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ಪೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್, ಟ್ವಿಟ್ಟರ್ ಮತ್ತು ಇನ್ನಿತರ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶ, ಪೋಸ್ಟ್ ಹಾಗೂ ಕಮೆಂಟ್ಗಳನ್ನು ಹಾಕಬಾರದು.

*ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗಲಿದ್ದು, ಪೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್, ಟ್ವಿಟ್ಟರ್ ಮತ್ತು ಇನ್ನಿತರ ಜಾಲತಾಣಗಳ ಮೇಲೆ ನಿಗಾವಹಿಸಲಾಗುವುದು.

*ಸಾಮಾಜಿಕ ಜಾಲತಾಣಗಳನ್ನು ಬಳಸಿ ತಪ್ಪು ಸಂದೇಶ ರವಾನಿಸಬಾರದು. ಈ ಬಗ್ಗೆ ಮಕ್ಕಳು, ಸಹೋದರ, ಸಹೋದರಿಯರು, ಅಕ್ಕಪಕ್ಕದವರು ಹಾಗೂ ಸಂಬಂಧಿಕರಿಗೆತಿಳಿಸುವುದು ಸೂಕ್ತ.

*ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮಕ್ಕೆ ಸಂಬಂಧಿಸಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್ ಹಾಕಬಾರದು

*ಯಾವುದೇ ರಾಜಕೀಯ ಮತ್ತು ಧಾರ್ಮಿಕ ವಿಷಯದ ಬಗ್ಗೆ ನಿಂದನೀಯ ಸಂದೇಶಗಳನ್ನು ಕಳುಹಿಸುವುದು, ರವಾನಿಸುವುದು ಅಪರಾಧವಾಗಿದ್ದು ಇದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು.

*ರಾಮ ಜನ್ಮಭೂಮಿ ಮತ್ತು ಬಾಬ್ರೀ ಮಸೀದಿ ವಿಚಾರ ದೇಶದ ಅತೀ ಗಂಭೀರ ವಿಚಾರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿನ ಗ್ರೂಪ್ ಸದಸ್ಯರು ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ದಕ್ಕೆಯುಂಟು ಮಾಡುವ ಸಂದೇಶಗಳನ್ನು ಬೇರೆಯವರಿಗೆ ರವಾನಿಸಬಾರದು.

*ಬೇರೆಯವರಿಂದ ಬಂದಂತಹ ಪ್ರಚೋದನಾತ್ಮಕ ಸಂದೇಶಗಳನ್ನು ವಿವಿಧ ಗ್ರೂಪ್ಗಳಿಗೆ ರವಾನಿಸುವುದು ಕಂಡುಬಂದಲ್ಲಿ, ಸಂದೇಶವನ್ನು ಕಳುಹಿಸಿದ ವ್ಯಕ್ತಿ ಮತ್ತು ಗ್ರೂಪ್ ಅಡ್ಮಿನ್ಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು.

*ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದಕ್ಕೆ ದಕ್ಕೆ ತರುವ ಯಾವುದೇ ಸಂದೇಶಗಳನ್ನು ಕಳುಹಿಸದಂತೆ ಜನರು ಕಟ್ಟೆಚ್ಚರ ವಹಿಸಬೇಕು.

*ತಪ್ಪದೇ ಈ ವಿಚಾರವನ್ನು ಎಲ್ಲರಿಗೂ ತಿಳಿಸಿ , ಕಾನೂನು ಮತ್ತು ನಿಯಮಗಳ ಬಗ್ಗೆ ನಾಗರಿಕರು ಜಾಗರೂಕರಾಗಿ ಇರಬೇಕು. ಮಾದರಿ ಸಮಾಜಕ್ಕೆ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.