ಬೆಂಗಳೂರು: ‘ಆಯುಷ್ ಚಿಕಿತ್ಸಾ ಪದ್ಧತಿಗೆ ಪ್ರೋತ್ಸಾಹ ನೀಡಲು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಬ್ಬರು ಆಯುಷ್ ವೈದ್ಯರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಗರದಲ್ಲಿ ಬುಧವಾರ ಆಯೋಜಿಸಿದ ವಿಶ್ವ ಹೋಮಿಯೋಪಥಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಪ್ರಾಥಮಿಕ ಚಿಕಿತ್ಸಾ ಪದ್ಧತಿ ಹಾಗೂ ಗುಣಮಟ್ಟದ ವೈದ್ಯಕೀಯ ಶಿಕ್ಷಣ ಪದ್ಧತಿಗೆ ವಿಶೇಷ ಆದ್ಯತೆ ನೀಡಬೇಕಿದೆ. 3ಡಿ ವಿಧಾನದ ಮೂಲಕ ಬೋಧಿಸುವ ವ್ಯವಸ್ಥೆ ಬಂದಿದೆ. ಅಂತಹ ತಂತ್ರಜ್ಞಾನಗಳನ್ನು ಶಿಕ್ಷಣ ಸಂಸ್ಥೆಗಳು ಅಳವಡಿಸಿಕೊಳ್ಳಬೇಕು. ಇತ್ತೀಚೆಗೆ ಅನೇಕ ರೋಗಗಳು ಬದಲಾದ ಜೀವನಶೈಲಿಯಿಂದ ಕೂಡ ಬರುತ್ತಿವೆ. ಹಾಗಾಗಿ ಉತ್ತಮವಾದ ಜೀವನಶೈಲಿಯನ್ನು ಅಳವಡಿಸಿಕೊಂಡು ಆಹಾರ ಪದ್ಧತಿ ಬದಲಾಯಿಸಿಕೊಳ್ಳಬೇಕು. ವೃತ್ತಿ ಬದುಕಿನ ಕಾರ್ಯದೊತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಜೀವನಶೈಲಿಯಿಂದ ಸಮಸ್ಯೆ: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ‘ಜನರ ಅಪೇಕ್ಷೆ, ನಿರೀಕ್ಷೆ ಹಾಗೂ ಜೀವನಶೈಲಿ ಬದಲಾಗಿದೆ. ದೇಶದಲ್ಲಿ ಶೇ 50ರಷ್ಟು ಸಾವಿನ ಪ್ರಕರಣಗಳು ಜೀವನಶೈಲಿ ಬದಲಾವಣೆಗೆ ಸಂಬಂಧಿಸಿದ್ದಾಗಿವೆ. ಸಾಂಕ್ರಾಮಿಕವಲ್ಲದ ರೋಗಗಳಿಂದ ಮೃತಪಡುವವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಔಷಧಗಳನ್ನು ಸಂಶೋಧಿಸಲಾಗುತ್ತಿದೆ. ಇದೇ ವೇಳೆ ಕಾಯಿಲೆಗಳು ಕೂಡ ಅಧಿಕವಾಗುತ್ತಿವೆ‘ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.