ಬೆಂಗಳೂರು: ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರು, ಸಿಬ್ಬಂದಿ ಸೇವೆ ಕಾಯಂಗೆ ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ನ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಆಯುಷ್ ಅಭಿಯಾನ ಅಡಿ 113 ತಜ್ಞ ವೈದ್ಯರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರದ ಈ ಯೋಜನೆ ತಾತ್ಕಾಲಿಕವಾದುದು. ಹಾಗಾಗಿ, ವೈದ್ಯರ ಹುದ್ದೆಗಳನ್ನು ಕಾಯಂ ಮಾಡಲು ಸಾಧ್ಯವೇ ಇಲ್ಲ. ಆದರೆ, ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಿ, ಕೃಪಾಂಕ ಹಾಗೂ ವಯೋಮಿತಿ ಸಡಿಲಿಕೆಯ ಅವಕಾಶ ಕಲ್ಪಿಸಲಾಗಿದೆ ಎಂದರು.

ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ:

ರಾಜ್ಯದಲ್ಲಿ 41,119 ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಕಾರ್ಯನಿರ್ವಹಣೆಯ ಆಧಾರದಲ್ಲಿ ಪ್ರತಿ ತಿಂಗಳು ₹ 5 ಸಾವಿರ ಗೌರವಧನ ನೀಡಲಾಗುತ್ತಿದೆ. 40 ಚಟುವಟಿಕೆಗಳಿಗೆ ಪ್ರೋತ್ಸಾಹಧನ ವಿತರಿಸಲಾಗುತ್ತಿದೆ. ಸದ್ಯಕ್ಕೆ ಅವರ ವೇತನ ಹೆಚ್ಚಳ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು. ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದ್ದರು.

ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ:

ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧವಿದ್ದರೂ, ನಿರ್ಮೂಲನೆ ಸಾಧ್ಯವಾಗಿಲ್ಲ. ಏಕ ಬಳಕೆ ಪ್ಲಾಸ್ಟಿಕ್ ಸಂಪೂರ್ಣ ನಿರ್ಮೂಲನೆಗೆ ನಾಂದಿ ಹಾಡಲು ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ಐದು ನಗರಗಳಲ್ಲಿ ಪ್ರಾಯೋಗಿಕ ಯೋಜನೆ ಜಾರಿಗೆ ತರಲಾಗುವುದು. ನಂತರ ರಾಜ್ಯವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಶ್ರಮಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸದನಕ್ಕೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.