ಬೆಂಗಳೂರು: ‘ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ’ ಯೋಜನೆಯಡಿ ಉತ್ತಮ ಸೇವೆ ಹಾಗೂ ಹೆಚ್ಚಿನ ರೋಗಿಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸಿದ ರಾಜ್ಯದ ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲಿ ಇಲ್ಲಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಅಗ್ರಸ್ಥಾನ ಪಡೆದುಕೊಂಡಿದೆ.

2023–24ನೇ ಸಾಲಿನಲ್ಲಿ ಈ ಯೋಜನೆಯಡಿ ದ್ವಿತೀಯ, ತೃತೀಯ ಹಾಗೂ ತುರ್ತು ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದಂತೆ ಅಧಿಕ ಮಂದಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿದ ಆಸ್ಪತ್ರೆಗಳ ಪಟ್ಟಿಯನ್ನು ವಿವಿಧ ವಿಭಾಗಗಳಲ್ಲಿ ಆರೋಗ್ಯ ಇಲಾಖೆ ಸಿದ್ಧಪಡಿಸಿದೆ.

ಅಗ್ರ 16 ಆಸ್ಪತ್ರೆಗಳಲ್ಲಿ ಇಲ್ಲಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ 18,336 ಮಂದಿಗೆ ಯೋಜನೆಯಡಿ ಸೇವೆ ನೀಡಿ, ಮುಂಚೂಣಿಯಲ್ಲಿದೆ. ಮೈಸೂರಿನ ಜಿಲ್ಲಾ ಆಸ್ಪತ್ರೆ 13,284, ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್ಜೆಐಸಿಆರ್) 10,945 ಮಂದಿಗೆ ಚಿಕಿತ್ಸೆ ಒದಗಿಸುವ ಮೂಲಕ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.

ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ 9,562, ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ 8,258, ಎಸ್ಜೆಐಸಿಆರ್ ಮೈಸೂರಿನಲ್ಲಿ 6,130, ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯಲ್ಲಿ (ಆರ್ಜಿಐಸಿಡಿ) 5,654, ನೆಪ್ರೊ ಯುರಾಲಜಿ ಸಂಸ್ಥೆಯಲ್ಲಿ 5,258 ರೋಗಿಗಳಿಗೆ ಚಿಕಿತ್ಸೆ ಒದಗಿಸಿದ್ದು, ಅಧಿಕ ಮಂದಿಗೆ ಚಿಕಿತ್ಸೆ ಒದಗಿಸಿದ ಅಗ್ರ ಹತ್ತು ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.