ಬೆಂಗಳೂರು: ರಾಜ್ಯದ ಎಲ್ಲರಿಗೂ ಆರು ತಿಂಗಳೊಳಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸೂಚಿಸಿದರು.

ಆಯುಷ್ಮಾನ್ ಭಾರತ್ ದಿನದ ಅಂಗವಾಗಿ ಶನಿವಾರ ನಡೆದ ‘ಆರೋಗ್ಯ ಮಂಥನ’ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಆರೋಗ್ಯಾಧಿಕಾರಿಗಳು, ವೈದ್ಯರು, ಸಿಬ್ಬಂದಿ ಮತ್ತು ಫಲಾನುಭವಿಗಳ ಜತೆ ಸಂವಾದ ನಡೆಸಿದ ಅವರು, ‘ಆಯುಷ್ಮಾನ್ ಯೋಜನೆಯ ಅನುಕೂಲಗಳನ್ನು ಪಡೆಯಲು ಎಲ್ಲರಿಗೂ ಅವಕಾಶವಾಗಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಕಾರ್ಡ್‌ಗಳ ನೋಂದಣಿಗೆ ವ್ಯವಸ್ಥೆ ಮಾಡಬೇಕು’ ಎಂದರು.

ರಾಜ್ಯದ ಪ್ರತಿ ಉಪ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಎಲ್ಲರಿಗೂ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಸಬೇಕು. ಈ ಎರಡೂ ಪರೀಕ್ಷೆಗಳ ವರದಿಗಳನ್ನು ಆರೋಗ್ಯ ಇಲಾಖೆಯ ಕೇಂದ್ರ ಕಚೇರಿಗೆ ರವಾನಿಸಬೇಕು. ರಾಜ್ಯದಾದ್ಯಂತ ಆಂದೋಲನದ ಮಾದರಿಯಲ್ಲಿ ಈ ಕಾರ್ಯಕ್ರಮ ನಡೆಸಬೇಕು ಎಂದರು.

ಬಳಿಕ ಮಾತನಾಡಿದ ಸಚಿವರು, ‘ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 2021ರಲ್ಲಿ ಈ ಯೋಜನೆ ಅಡಿ 6.68 ಪ್ರಕರಣಗಳಲ್ಲಿ ₹ 960 ಕೋಟಿ ವೆಚ್ಚದ ಚಿಕಿತ್ಸಾ ಸೌಲಭ್ಯವನ್ನು ಜನರಿಗೆ ಒದಗಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.