ಬೆಂಗಳೂರು: ‘ಮುಡಾ ಹಗರಣ ನಡೆದಿರುವ ಕಾರಣಕ್ಕೆ ಹಿಂದಿನ ಆಯುಕ್ತರನ್ನು ಅಮಾನತುಗೊಳಿಸಲಾಗಿದೆ. ಮುಂದಿನ ಸರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು. ಹಗರಣದ ಸಂಬಂಧ ಅವರು ರಾಜೀನಾಮೆ ಕೊಡಲೇಬೇಕಾಗುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಮುಡಾದಲ್ಲಿ ಹಗರಣ ನಡೆದಿಲ್ಲ, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈಗ ಪ್ರಕರಣ ಹೈಕೋರ್ಟ್‌ನಲ್ಲಿದ್ದು, ಮುಡಾ ಹಿಂದಿನ ಆಯುಕ್ತರನ್ನು ಅಮಾನತ ಮಾಡಿದ್ದಾರೆ ಹಗರಣ ಆಗಿಲ್ಲದಿದ್ದರೆ ಅಮಾನತು ಮಾಡುತ್ತಿದ್ದರೆ? ಕಾದು ನೋಡಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದರೆ ಎಂದು ಹೇಳಿದರು.

ವಾಲ್ಮೀಕಿ ಹಗರಣ ಆದಾಗ ಮತ್ತು ಅದಕ್ಕೆ ಸಂಬಂಧಿಸಿದಂತೆ ಅಧಿಕಾರಿ ಚಂದ್ರಶೇಖರ್ ಅವರು ಆತ್ಯಹತ್ಯೆ ಮಾಡಿಕೊಂಡಾಗ ಸರ್ಕಾರದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಹೇಳಿದ್ದರು. ಆ ಬಳಿಕ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹87 ಕೋಟಿ ಹಗರಣ ಆಗಿದ್ದನ್ನು ಸದನದಲ್ಲಿಯೇ ಒಪ್ಪಿಕೊಂಡಿದ್ದರು ಎಂದು ವಿಜಯೇಂದ್ರ ತಿಳಿಸಿದರು.

ಮಹಾನ್ ನಾಯಕರು ಎಲ್ಲಿ ಹೋದ್ರು ?

ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಆಗ ನಿಮ್ಮ ಮಹಾನ್ ನಾಯಕರು ಎಲ್ಲಿದ್ದರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ವಿಜಯೇಂದ್ರ ಪ್ರಶ್ನಿಸಿದರು.

ದೂರು ಕೊಡಲು ಡಿ.ಕೆ.ಶಿವಕುಮಾರ್ ಏಕೆ ಇರಲಿಲ್ಲ. ಮುಖ್ಯಮಂತ್ರಿಯವರು ಏಕೆ ಬರಲಿಲ್ಲ. ನಿಮ್ಮ ಸರ್ಕಾರದ ಇತರ ಹಿರಿಯ ನಾಯಕರು, ಪಕ್ಷದ ಹಿರಿಯ ನಾಯಕರು ರಾಜಭವನದಲ್ಲಿ ಏಕೆ ಕಾಣಿಸಿಕೊಳ್ಳಲಿಲ್ಲ. ಇದಕ್ಕೆ ಪ್ರಿಯಾಂಕ್ ಖರ್ಗೆ ಅವರು ಉತ್ತರಿಸಲಿ ಎಂದು ಒತ್ತಾಯಿಸಿದರು.

ಹಗರಣಗಳಲ್ಲಿ ಮುಳುಗಿದ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ತನ್ನನ್ನು ಕಾಪಾಡಲು ಮತ್ತು ಭ್ರಷ್ಟಾಚಾರದಿಂದ ನುಣುಚಿಕೊಳ್ಳಲು ಬಿಜೆಪಿ ಮೇಲೆ ಕೆಸರು ಎರಚುವ ಕೆಲಸ ಮಾಡುತ್ತಿದೆ. ಬಿಜೆಪಿ ಮುಖಂಡರ ಮೇಲೆ ಕೇಸುಗಳನ್ನು ದಾಖಲಿಸುವ ಪ್ರಯತ್ನದಲ್ಲಿದ್ದಾರೆ. ಇದ್ಯಾವುದಕ್ಕೂ ನಾವು ಅಂಜುವುದಿಲ್ಲ ಎಂದು ವಿಜಯೇಂದ್ರ ಹೇಳಿದರು.

ಮುಡಾ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಬಂದ ನಂತರ ಕಾಂಗ್ರೆಸ್‌ನ ಯಾರ ಮನೆಯಲ್ಲಿ ಎಷ್ಟು ಬಾಗಿಲುಗಳಿವೆ. ಎಷ್ಟು ಬಾಗಿಲು ಕಿತ್ತುಕೊಂಡು ಹೋಗಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

ಪಕ್ಷದ ವತಿಯಿಂದ ಕಳೆದ ಬಾರಿ 1.04 ಕೋಟಿ ಸದಸ್ಯರ ನೋಂದಣಿ ಆಗಿತ್ತು. ಅದಕ್ಕಿಂತಲೂ ಹೆಚ್ಚು ಸದಸ್ಯತ್ವ ನೋಂದಣಿ ಮಾಡುವ ಸಂಕಲ್ಪ ನಮ್ಮದು. ರಾಜ್ಯದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಯಾನ ನಡೆಯುತ್ತಿದೆ. ಪ್ರತಿ ಬೂತ್‌ನಲ್ಲಿ ಕನಿಷ್ಠ 300 ರಿಂದ 400 ಸಂಖ್ಯೆಯಲ್ಲಿ ಸದಸ್ಯ

ಅಮಿತ್ ಶಾ ಜತೆ ಚರ್ಚೆ:

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳ ಕುರಿತು ಇತ್ತೀಚೆಗೆ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್‌ಶಾ ಅವರ ಜತೆ ಚರ್ಚೆ ನಡೆಸಿದ್ದೇನೆ ಎಂದು ವಿಜಯೇಂದ್ರ ತಿಳಿಸಿದರು.

ಚನ್ನಪಟ್ಟಣದಿಂದ ಕಣಕ್ಕಿಳಿಯುವ ಬಗ್ಗೆ ಸಿ.ಪಿ.ಯೋಗೇಶ್ವರ್ ಅವರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಸಂಡೂರು ಮತ್ತು ಶಿಗ್ಗಾವಿಗೂ ಅನೇಕ ಆಕಾಂಕ್ಷಿಗಳು ಇದ್ದಾರೆ. ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಚರ್ಚೆ ಮಾಡಿ, ಅಭ್ಯರ್ಥಿಗಳ ಹೆಸರನ್ನು ದೆಹಲಿಗೆ ಕಳಿಸಿಕೊಡುತ್ತೇವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.