ಬೆಂಗಳೂರು: ‘ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡೇ ತನಿಖೆ ಎದುರಿಸುತ್ತಿರುವ ಭ್ರಷ್ಟ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೆ ನೀವು (ಸಿದ್ದರಾಮಯ್ಯ) ಒಳಗಾಗಿರುವುದನ್ನು ದೇಶವೇ ಗಮನಿಸಿದೆ. ಕಾನೂನಿನ ಕುಣಿಕೆ ದಿನೇ ದಿನೇ ಬಿಗಿಯಾಗುತ್ತಿರುವುದರಿಂದ ನಿಮಗೆ ನೆಮ್ಮದಿಯೇ ಇಲ್ಲವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.

‘ನನ್ನ ವಿರುದ್ಧ ವೃಥಾ ಆರೋಪ ಮಾಡುವ ಬದಲು, ತನಿಖೆ ನಡೆಸಲು ನಿಮ್ಮದೇ ಸರ್ಕಾರ ಇದೆ. ನಿಮ್ಮ ಬಳಿ ಬ್ರಹ್ಮಾಸ್ತ್ರವೇ ಇದೆ. ಆದರೆ, ನನ್ನ ವಿರುದ್ಧ ಹಾಸ್ಯಾಸ್ಪದವಾಗಿ ಟೀಕೆ ಮಾಡುತ್ತಾ ಓಡಾಡುವ ನಿಮ್ಮ ಪರಿಸ್ಥಿತಿ ನಗುವಂತಾಗಿದೆ’ ಎಂದು ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.

‘ಅಮಾಯಕ ದಲಿತ ಕುಟುಂಬವನ್ನು ವಂಚಿಸಿ ಭೂಮಿ ಪಡೆದುಕೊಂಡ ಆರೋಪ ನಿಮ್ಮ ಕುಟುಂಬದ ಮೇಲಿದೆ. ಅದೇ ಭೂಮಿಯನ್ನು ಮುಡಾ ಬಳಸಿಕೊಂಡಿದೆ ಎಂದು 14 ನಿವೇಶನಗಳನ್ನು ಲಪಟಾಯಿಸಿದ ತನಿಖೆ ನಿಮ್ಮ ವಿರುದ್ಧವೇ ನಡೆಯುತ್ತಿದೆ. ನೀವು ತಪ್ಪೇ ಮಾಡದಿದ್ದರೆ ಮುಡಾಗೆ ನಿವೇಶನಗಳನ್ನು ಬೇಷರತ್ತಾಗಿ ಏಕೆ ರಾತ್ರೋರಾತ್ರಿ ವಾಪಸ್ ನೀಡಿದಿರಿ’ ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.