ಮೈಸೂರು:ನಂಜನಗೂಡು ತಾಲ್ಲೂಕಿನ ಹುಳಿಮಾವು ಗ್ರಾಮದಲ್ಲಿ ಬಾಬು ಜಗಜೀವನರಾಂ ಪುತ್ಥಳಿಯನ್ನು ಬುಧವಾರ ತಡರಾತ್ರಿ ಧ್ವಂಸಗೊಳಿಸಲಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ಎರಡು ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಪುತ್ಥಳಿಯ ಕುತ್ತಿಗೆಯನ್ನು ಕಿಡಿಗೇಡಿಗಳು ಕತ್ತರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗುರುವಾರ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ಆರಂಭಿಸಿದರು.

ನಂಜನಗೂಡು ಗ್ರಾಮಾಂತರ ವಿಭಾಗದ ಪೊಲೀಸರು ಸ್ಥಳಕ್ಕೆ ಬಂದು ಗ್ರಾಮಸ್ಥರನ್ನು ಸಮಾಧಾನಪಡಿಸಲು ಯತ್ನಿಸಿದರೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ರಸ್ತೆ ತಡೆ ಮುಂದುವರಿಸಿದರು.

ನಂತರ, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ದಯಾನಂದ್ ಮತ್ತು ಸರ್ಕಲ್ ಇನ್‌ಸ್ಪೆಕ್ಟರ್ ಶಿವಮೂರ್ತಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸುತ್ತಿದ್ದಾರೆ. ಪ್ರಕರಣ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.