ಬೆಂಗಳೂರು: ರಾಜ್ಯದಾದ್ಯಂತ ಮುಸ್ಲಿಮರು ಶ್ರದ್ಧೆ, ಭಕ್ತಿಯಿಂದ ಗುರುವಾರ ಈದ್ ಉಲ್ ಅಧಾ ಆಚರಿಸಿದರು.

ತಮ್ಮ ಅನುಕೂಲಕ್ಕೆ ತಕ್ಕಂತೆ ಸಮಯ ನಿಗದಿ ಮಾಡಿಕೊಂಡು ಮೈದಾನ ಹಾಗೂ ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಬಳಿಕ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮಕ್ಕಳು, ಹಿರಿಯರು ಸಾಂಪ್ರದಾಯಿಕ ಹೊಸ ಬಟ್ಟೆ ಧರಿಸಿ ಬಂದಿದ್ದರು. ತಲೆ ಮೇಲೆ ವಿವಿಧ ವಿನ್ಯಾಸಗಳ ಟೊಪ್ಪಿಗೆ ಧರಿಸಿ ಗಮನ ಸೆಳೆದರು.

ಮುಸ್ಲಿಂ ಬಾಂಧವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಮುಖಂಡರು, ಸೆಲೆಬ್ರಿಟಿಗಳು ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಪ್ರಾರ್ಥನೆ ಮೈದಾನ ಹಾಗೂ ಮಸೀದಿಗಳಲ್ಲಿ ತ್ಯಾಗ ಬಲಿದಾನದ ಸಂಕೇತವಾಗಿ ಕುರ್ಬಾನಿ ಸೇವೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.