ಬೆಂಗಳೂರು: ಪ್ರಕರಣವೊಂದರ ವಿಚಾರಣೆಗೆ ನ್ಯಾಯಾಲಯಕ್ಕೆ ಆಗಮಿಸಿದ್ದ ವಿಚಾರವಾದಿ ಪ್ರೊ. ಭಗವಾನ್ ಮುಖಕ್ಕೆ ಮಸಿ ಬಳಿದಿರುವ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಂಡಾಯ ಸಾಹಿತ್ಯ ಸಂಘಟನೆ, ಕರ್ನಾಟಕ ಒತ್ತಾಯಿಸಿದೆ.

‘ಮೀರಾ ರಾಘವೇಂದ್ರ ಎಂಬ ವಕೀಲೆ ನ್ಯಾಯಾಲಯದ ಆವರಣದಲ್ಲಿ ವಿಚಾರವಾದಿ ಪ್ರೊ ಭಗವಾನ್ ಅವರ ಮುಖಕ್ಕೆ ಮಸಿ ಎರಚಿರುವುದು ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿಸ್ವಾತಂತ್ರ್ಯವಿದೆ. ಆ ಸ್ವಾತಂತ್ರ್ಯವನ್ನು ಉಲ್ಲಂಘಿಸಿದವರಿಗೆ ದಂಡನೆ ನೀಡಲು ನ್ಯಾಯಾಲಯಗಳಿವೆ. ಮಾನ್ಯ ವಕೀಲೆ ತಾವೇ ಭಗವಾನ್ ಮೇಲೆ ದಾವೆ ಹೂಡಿದ್ದಾರೆ. ಅದೇ ನ್ಯಾಯಾಲಯದ ಆವರಣದಲ್ಲಿ ಸಮವಸ್ತ್ರಧಾರಿಯಾಗಿ ಕಾನೂನನ್ನು ಕೈಗೆತ್ತಿಕೊಂಡಂತೆ ಭಗವಾನ್ ಮೇಲೆ ಹಲ್ಲೆನಡೆಸಿರುವುದು ಅನಾಗರಿಕವೂ ಅಪ್ರಜಾಸತ್ತಾತ್ಮಕವೂ ಅಸಂವಿಧಾನಿಕವೂ ಆದ ಹಿಂಸಾಮಾರ್ಗ. ಈ ವಕೀಲೆ ನ್ಯಾಯಾಲಯದಲ್ಲಿ ವಾದ ಮಾಡುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ. ವಕೀಲರ ಸಂಘವು ಈ ವಕೀಲೆಯು ನ್ಯಾಯಾಲಯದಲ್ಲಿ ವಕಾಲತ್ತು ಮಾಡುವ ಮಾನ್ಯತೆಯನ್ನು ರದ್ದುಗೊಳಿಸಿ ಸಂಘದ ಘನತೆ ಗೌರವವನ್ನು ಉಳಿಸಿಕೊಳ್ಳುವ ಅಗತ್ಯವಿದೆ.ಸರ್ಕಾರವೂ ಈ ವಕೀಲೆಯ ಮೇಲೆ ಕಾನೂನು ಕ್ರಮಗಳನ್ನು ಜರುಗಿಸಬೇಕೆಂದು ಒತ್ತಾಯಿಸುತ್ತೇವೆ’ ಎಂದು ಬಂಡಾಯ ಸಾಹಿತ್ಯ ಸಂಘಟನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:Video: ಪ್ರೊ. ಕೆ.ಎಸ್. ಭಗವಾನ್ ಮುಖಕ್ಕೆ ಮಸಿ

ಜತೆಗೆ ವಕೀಲೆಯ ವಾದ ಮಂಡನೆಯ ಸನ್ನದನ್ನು ನ್ಯಾಯಾಲಯವು ರದ್ದುಪಡಿಸಬೇಕೆಂದು ಸಂಘಟನೆ ಒತ್ತಾಯಿಸಿದೆ.

ಸಂಘಟನೆಯ ಹೇಳಿಕೆಗೆ ಡಾ. ಬಂಜಗೆರೆ ಜಯಪ್ರಕಾಶ್, ಡಾ. ಕೆ. ಮರುಳಸಿದ್ದಪ್ಪ, ಪ್ರೊ. ಜಿ ಕೆ ಗೋವಿಂದ ರಾವ್, ಪ್ರೊ. ಎಸ್. ಜಿ. ಸಿದ್ಧರಾಮಯ್ಯ, ರುದ್ರಪ್ಪ ಹನಗವಾಡಿ, ಡಾ. ವಸುಂಧರಾ ಭೂಪತಿ. ಕೆ. ಷರೀಫ. ಡಾ. ಕಾಳೇಗೌಡ ನಾಗವಾರ, ಡಾ. ಹಿ. ಶಿ. ರಾಮಚಂದ್ರೇಗೌಡ ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:ಪ್ರೊ. ಕೆ.ಎಸ್. ಭಗವಾನ್ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ಮಸಿ ಬಳಿದ ವಕೀಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.