ಬೆಂಗಳೂರು: ಕೊರೊನಾ ಸೋಂಕು ತಗುಲಿರುವ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಆಸ್ಪತ್ರೆಗೆ ಹೋಗುವ ವೇಳೆ ಹೆಚ್ಚು ಜನರನ್ನು ಸೇರಿಸಿದ್ದರು. ಈ ಸಂಬಂಧ ಅವರು ಹಾಗೂ ಬೆಂಬಲಿಗರ ವಿರುದ್ಧ ಜೆ.ಜೆ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ನೀಡಿರುವ ದೂರು ಆಧರಿಸಿ ಸಾಂಕ್ರಾಮಿಕ ರೋಗ ಹರಡಲು ಪ್ರಯತ್ನಿಸಿದ ಹಾಗೂ ಅಕ್ರಮವಾಗಿ ಗುಂಪು ಸೇರಿದ್ದ ಆರೋಪದಡಿ ಇಮ್ರಾನ್ ಪಾಷಾ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ' ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೂತ ತಿಳಿಸಿದ್ದಾರೆ.

ಪಾಸಿಟಿವ್ ವರದಿ ಬರುತ್ತಿದ್ದಂತೆ ಇಮ್ರಾನ್ ಅವರನ್ನು ಕರೆದೊಯ್ಯಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಆಂಬುಲೆನ್ಸ್ ಸಮೇತ ಮನೆಗೆ ಹೋಗಿದ್ದರು. ಅಲ್ಲಿಯೇ ನೂರಾರು ಜನ ಸೇರಿದ್ದರು. ಕೊರೊನಾ ಇರುವುದು ದೃಢಪಟ್ಟಿದ್ದರೂ ಇಮ್ರಾನ್ ಅಂತರ ಕಾಯ್ದುಕೊಳ್ಳದೇ ಓಡಾಡಿದ್ದರು. ಇದು ಅಧಿಕಾರಿಗಳು ಹಾಗೂ ಪೊಲೀಸರ ಆತಂಕಕ್ಕೂ ಕಾರಣವಾಗಿತ್ತು. ಗುಂಪಿನ ಮಧ್ಯೆಯೇ ಇಮ್ರಾನ್ ಆಂಬುಲೆನ್ಸ್ ಏರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.