ರಾಮನಗರ: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕಾರ್ಯಾರಂಭವು ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಪೂರ್ವ ನಿಗದಿಯಂತೆ ಮಂಗಳವಾರ ಬೆಳಿಗ್ಗೆ 8ರಿಂದ ಹೆದ್ದಾರಿ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದ್ದು, ಅದಕ್ಕೆ ಅಗತ್ಯವಾದ ಸಿಬ್ಬಂದಿಯನ್ನು ಈಗಾಗಲೇ ಟೋಲ್ ಪ್ಲಾಜಾ ಬಳಿ ನಿಯೋಜಿಸಿದೆ. ಅನುಮತಿ ಹಾಗೂ ಪೊಲೀಸ್ ಭದ್ರತೆ ಕೋರಿ ಜಿಲ್ಲಾಡಳಿತಕ್ಕೆ ಮನವಿಯನ್ನೂ ಸಲ್ಲಿಸಿದೆ.

ಬೆಂಗಳೂರು ನಗರ ಜಿಲ್ಲೆಯ ಕಣಮಿಣಕಿ ಹಾಗೂ ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿ ಬಳಿ ಹೆದ್ದಾರಿ ಪ್ರಾಧಿಕಾರವು ಎರಡು ಟೋಲ್ ಪ್ಲಾಜಾ ನಿರ್ಮಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಹೋಗುವವರು ಕಣಮಿಣಕಿ ಬಳಿ ಹಾಗೂ ಮೈಸೂರು–ರಾಮನಗರ ಕಡೆಯಿಂದ ಬೆಂಗಳೂರು ಪ್ರವೇಶಿಸುವವರು ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟಬೇಕಿದೆ.

ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆಯೇ ಟೋಲ್ ಸಂಗ್ರಹ ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಮುಂಜಾನೆ ಟೋಲ್ ಪ್ಲಾಜಾಗೆ ಮುತ್ತಿಗೆ ಹಾಗೂ ಪ್ರತಿಭಟನೆಗೆ ಮುಂದಾಗಿವೆ. ಟೋಲ್ ಆರಂಭಿಸಲು ಮುಂದಾಗಿದ್ದೇ ಆದಲ್ಲಿ ಟೋಲ್ ಪ್ಲಾಜಾಗಳನ್ನು ಕೆಡವುವ ಎಚ್ಚರಿಕೆಯನ್ನೂ ನೀಡಿವೆ. ಮತ್ತೊಂದೆಡೆ, ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.