ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜೂನ್ 11ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಈ ಭಾಗದಲ್ಲಿ ಚಂಡಮಾರುತದ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು ಮೀನುಗಾರಿಕೆ ನಡೆಸಲು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು ಹಾಗೂ ಮಕ್ಕಳು ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಕಾರವಾರ, ಮಂಗಳೂರು, ಪಣಂಬೂರು, ಹೊನ್ನಾವರ, ಭಟ್ಕಳ, ಮಲ್ಪೆ ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಒಳನಾಡು ಭಾಗದಲ್ಲೂ ಗಾಳಿಯು 30ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಿದೆ.

ಮಂಗಳವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಕಳೆದ 24 ಗಂಟೆ ಅವಧಿಯಲ್ಲಿ ತುಮಕೂರು ಜಿಲ್ಲೆಯ ಕೊನೇಹಳ್ಳಿಯಲ್ಲಿ 2 ಸೆಂ.ಮೀ, ಉತ್ತರ ಕನ್ನಡದ ಶಿರಾಲಿ, ಕಾರವಾರ, ಕುಮಟಾ, ಅಂಕೋಲಾ, ಹಾಸನದ ಚನ್ನರಾಯಪಟ್ಟಣ, ಚಿತ್ರದುರ್ಗದ ನಾಯಕನಹಟ್ಟಿ, ತುಮಕೂರಿನ ಮಧುಗಿರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.