ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವನಗೌಡ ಬಾದರ್ಲಿ ನಾಮಪತ್ರ ಸಲ್ಲಿಕೆ

Published 26 ಜೂನ್ 2024, 15:28 IST
Last Updated 26 ಜೂನ್ 2024, 15:28 IST
ಅಕ್ಷರ ಗಾತ್ರ

ಬೆಂಗಳೂರು:ವಿಧಾನಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಸವನಗೌಡ ಬಾದರ್ಲಿ ಬುಧವಾರ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿಯೂ ಆಗಿರುವ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾನೂನು ಸಚಿವ ಎಚ್‌.ಕೆ.ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ಎಸ್‌.ತಂಗಡಗಿ, ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಭೋಸರಾಜು ಅವರು ಬಸವನಗೌಡ ಬಾದರ್ಲಿ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT