ಭಾನುವಾರ ರಾತ್ರಿಯಿಂದಲೇ ನಡೆದಿರುವ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ರಚನೆಯ ಕಸರತ್ತು ಮಂಗಳವಾರ ತಡರಾತ್ರಿ ವೇಳೆಗೆ ಪೂರ್ಣಗೊಂಡಿದೆ. ಬಸವರಾಜ ಬೊಮ್ಮಾಯಿ ಸಂಪುಟದ 29 ಮಂದಿ ಹೊಸ ಸಚಿವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಿರಿಯ ಮಗ ಬಿ.ವೈ. ವಿಜಯೇಂದ್ರಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಆಯಕಟ್ಟಿನ ಖಾತೆಯೇ ಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಟ್ಟು ಹಿಡಿದಿದ್ದರು. ಆದರೆ, ಉಪಮುಖ್ಯಮಂತ್ರಿ ಸ್ಥಾನ ಈ ಸಂಪುಟದಲ್ಲಿ ಇರುವುದಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಾಗೇ ಈಗಿನ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರೂ ಇಲ್ಲ ಎಂದು ಹೇಳಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮತ್ತು ಸಂಬಂಧಿತ ರಾಜಕೀಯ ಬೆಳವಣಿಗೆಗಳ ಕ್ಷಣಕ್ಷಣದ ಅಪ್‌ಡೇಟ್ ಇಲ್ಲಿ ಲಭ್ಯ.