ಬೆಂಗಳೂರು: ಪುನೀತ್ ರಾಜ್ಕುಮಾರ್ ಅಭಿನಯದ ಕೊನೆಯ ಸಿನಿಮಾ ‘ಜೇಮ್ಸ್’ ಪ್ರದರ್ಶನಕ್ಕೆ ಯಾವುದೇ ರೀತಿಯಲ್ಲಿ ಅಡ್ಡಿಪಡಿಸಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜೇಮ್ಸ್ ಸಿನಿಮಾವನ್ನು ಚಿತ್ರಮಂದಿರಗಳಿಂದ ತೆಗೆದು ಹಾಕಲಾಗುತ್ತಿದೆ ಎಂಬ ಆರೋಪದ ಕುರಿತು ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಈ ಕುರಿತು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರತಿನಿಧಿಗಳ ಜತೆ ಮಾತನಾಡಿದ್ದೇನೆ. ಯಾವುದೇ ಕಡೆಯಲ್ಲಿ ಜೇಮ್ಸ್ ಚಿತ್ರಕ್ಕೆ ತೊಂದರೆಯಾಗಿದ್ದರೆ ಅದನ್ನು ಸರಿಪಡಿಸುವಂತೆ ತಿಳಿಸಿದ್ದೇನೆ’ ಎಂದರು.

ಅನಾವಶ್ಯಕವಾಗಿ ಜೇಮ್ಸ್ ಚಿತ್ರವನ್ನು ಚಿತ್ರಮಂದಿರಗಳಿಂದ ತೆಗೆಯುವಂತಿಲ್ಲ. ನಿರ್ಮಾಪಕರು ಮತ್ತು ಚಿತ್ರಮಂದಿರದ ಮಾಲೀಕರು ಈ ಸಮಸ್ಯೆ ಸರಿಪಡಿಸಲು ಸಾಧ್ಯವಿದೆ. ಯಾವುದೇ ರೀತಿಯಲ್ಲಿ ತೊಂದರೆಯಾದಲ್ಲಿ ತಮಗೆ ಅಥವಾ ಚಲನಚಿತ್ರ ವಾಣಿಜ್ಯ ಮಂಡಳಿ ಗಮನಕ್ಕೆ ತರುವಂತೆ ಕೋರಲಾಗಿದೆ. ಚಿತ್ರನಟ ಶಿವರಾಜ್ ಕುಮಾರ್ ಬಳಿಯೂ ಚರ್ಚಿಸಲಾಗಿದೆ. ಕಾಂಗ್ರೆಸ್ ಪಕ್ಷದವರು ಸಿನಿಮಾವನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.