ಬೆಂಗಳೂರು: ಚೆನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ವಿ. ಶಿವಗಂಗಾ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ, ಬಸವರಾಜು ಅವರ ಹೆಸರನ್ನು ವಿಧಾನಸಭೆಯ ಕಾರ್ಯದರ್ಶಿ ಅವರು ಕರೆದರು.

ಹಸಿರು ಶಾಲು ಧರಿಸಿ ಬಂದಿದ್ದ ಅವರು, ‘ಭಗವಂತ ಮತ್ತು ನನ್ನ ಆರಾಧ್ಯ ದೈವ ಡಿ.ಕೆ ಶಿವಕುಮಾರ್ ಸಾಹೇಬರ ಮೇಲೆ ಪ್ರಮಾಣ ಮಾಡುತ್ತೇನೆ‘ ಎಂದು ಪ್ರಮಾಣವಚನ ಸ್ವೀಕಾರ ಮಾಡಿದರು.

ಪ್ರಮಾಣವಚನ ಕಾರ್ಯಕ್ರಮ ಆರಂಭವಾಗುವುದಕ್ಕೂ ಮುನ್ನ ಮಾತನಾಡಿದ ಹಂಗಾಮಿ ಸಭಾಧ್ಯಕ್ಷ ಆರ್.ವಿ ದೇಶಪಾಂಡೆ ಅವರು, ದೇವರ ಹಾಗೂ ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಬೇಕು ಎಂದು ಸೂಚನೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.