ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಭ್ರಷ್ಟಾಚಾರ ಡೆವಲಪ್ಮೆಂಟ್ ಅಥಾರಿಟಿಯಾಗಿ ಬದಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ವ್ಯಾಪಕ ಅವ್ಯವಹಾರ ನಡೆಯುತ್ತಿರುವ ದೂರುಗಳನ್ನು ಆಧರಿಸಿ ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ದಾಳಿ ಮಾಡಿ ಶೋಧ ನಡೆಸಿದ್ದಾರೆ. ಕಚೇರಿಯಲ್ಲಿದ್ದ ಮೂವರು ದಲ್ಲಾಳಿಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬೆಂಗಳೂರಿನ ಬದಲು ಭ್ರಷ್ಟಾಚಾರವನ್ನು ‘ಡೆವಲಪ್ಮೆಂಟ್’ ಮಾಡಿದ್ದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ. ಇದೇ ಬೊಮ್ಮಾಯಿ ಅವರ ಹೆಗ್ಗಳಿಕೆ ಮತ್ತು ಸಾಧನೆಯಾಗಿದೆ’ ಎಂದು ಕುಟುಕಿದೆ.

ನಿವೇಶನ ಹಂಚಿಕೆ, ಪರಿಹಾರ ವಿತರಣೆ ಮುಂತಾದ ಪ್ರಕ್ರಿಯೆಗಳಲ್ಲಿ ಭಾರಿ ಅಕ್ರಮಗಳು ನಡೆದಿರುವುದು ಲೋಕಾಯುಕ್ತ ದಾಳಿಯಿಂದ ಹೊರಬಂದಿದೆ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದೆ.

ಇವನ್ನೂ ಓದಿ: ಸುಳ್ಳಿನ ತುತ್ತೂರಿ ಊದುವ ಬದಲು ಅಧಿವೇಶನಕ್ಕೆ ಹಾಜರಾಗಿ: ಸಿದ್ದು ವಿರುದ್ಧ ಬಿಜೆಪಿ

ಜನರ ಆಶೋತ್ತರಗಳಿಗೆ ಸ್ಪಂದಿಸುವ ಪ್ರಣಾಳಿಕೆ: ಸಚಿವ ಡಾ. ಕೆ. ಸುಧಾಕರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.