ಬೆಂಗಳೂರು: ‘ಗೋವು ಮಾಂಸದ ತ್ಯಾಜ್ಯವನ್ನು ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದು, ಈ ಕೃತ್ಯದ ಬಗ್ಗೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ’ ಎಂದು ನಟಿ ಐಂದ್ರಿತಾ ರೈ ಆರೋಪಿಸಿದ್ದಾರೆ.

‘ಎಕ್ಸ್ (ಟ್ವಿಟರ್)’ ಸಾಮಾಜಿಕ ಮಾಧ್ಯಮದಲ್ಲಿ ಗೋವು ಮಾಂಸ ತ್ಯಾಜ್ಯದ ಫೋಟೊ ಸಮೇತ ಪೋಸ್ಟ್ ಪ್ರಕಟಿಸಿರುವ ಐಂದ್ರಿತಾ, ‘ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಬೇಕು’ ಎಂದು ಪೊಲೀಸ್ ಕಮಿಷನರ್ ಹಾಗೂ ಡಿಸಿಪಿ ಅವರನ್ನು ಒತ್ತಾಯಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಪೋಸ್ಟ್ ಟ್ಯಾಗ್ ಮಾಡಿದ್ದಾರೆ.

‘ಗೋವುಗಳನ್ನು ಹತ್ಯೆ ಮಾಡಿ, ಅದರ ಮಾಂಸ ಹಾಗೂ ಅದರ ತ್ಯಾಜ್ಯವನ್ನು ಟ್ರಕ್‌ನಲ್ಲಿ ಸಾಗಿಸಲಾಗುತ್ತಿತ್ತು. ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಟ್ರಕ್ ಹೊರಟಿದ್ದ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ಇತ್ತು. ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲು ಪೊಲೀಸರು ಹಿಂದೇಟು ಹಾಕಿದರು’ ಎಂದು ನಟಿ ದೂರಿದ್ದಾರೆ.

ಪೋಸ್ಟ್ ಹಂಚಿಕೊಂಡಿರುವ ಹಲವರು, ‘ಗೋವುಗಳ ಹತ್ಯೆಯನ್ನು ನಿಷೇಧಿಸಲಾಗಿದೆ. ಇಂಥ ಸಂದರ್ಭದಲ್ಲಿಯೇ ಸಾಕಷ್ಟು ಗೋವುಗಳನ್ನು ಹತ್ಯೆ ಮಾಡಿ ಮಾಂಸದ ತ್ಯಾಜ್ಯವನ್ನು ಸಾಗಿಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ’ ಎಂದು ಒತ್ತಾಯಿಸಿದ್ದಾರೆ.

ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ, ‘ಮಾಹಿತಿ ಬರುತ್ತಿದ್ದಂತೆ ವೈದ್ಯ ಸಮೇತ ಸ್ಥಳಕ್ಕೆ ಹೋಗಿ ಟ್ರಕ್‌ನಲ್ಲಿ ಪರಿಶೀಲನೆ ನಡೆಸಲಾಗಿದೆ. ಟ್ರಕ್‌ನಲ್ಲಿ ಗೋವಿನ ಮಾಂಸದ ತ್ಯಾಜ್ಯವಿರುವುದು ವೈದ್ಯರ ತಪಾಸಣೆಯಿಂದ ತಿಳಿದುಬಂದಿದೆ. ಆದರೆ, ಈ ತ್ಯಾಜ್ಯ ಸಾಗಣೆಗೆ ಬಿಬಿಎಂಪಿ ಪರವಾನಗಿ ಇರುವುದು ಗೊತ್ತಾಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.