ಬೆಂಗಳೂರು: ‘5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳುಪಬ್ಲಿಕ್ ಪರೀಕ್ಷೆ ಎದುರಿಸಲು ಮಾನಸಿಕವಾಗಿ ಸದೃಢರಾಗಿರುವುದಿಲ್ಲ. ಆದ್ದರಿಂದ ಅವರಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ತೀರ್ಮಾನವನ್ನು ಸರ್ಕಾರ ಕೂಡಲೇ ಕೈಬಿಡಬೇಕು’ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕ ಧ್ವನಿ ವೇದಿಕೆ ಆಗ್ರಹಿಸಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ಎಸ್. ಲಕ್ಷ್ಮಿನಾರಾಯಣ, ‘ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿವೇಚನೆ ಇಲ್ಲದೇ 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದಾರೆ. ಇದು ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಆತಂಕವನ್ನುಂಟು ಮಾಡಿದೆ. ಪಬ್ಲಿಕ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿರುವ ಅಧಿಸೂಚನೆ ಅವೈಜ್ಞಾನಿಕವಾಗಿದ್ದು, ಇದು ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿದೆ. ಇದು ರಾಜ್ಯ ಪಠ್ಯಕ್ರಮವನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಇದರಿಂದ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಭಾರಿ ಅಸಮಾನತೆ ಸೃಷ್ಟಿಯಾಗಲಿದೆ. ಸರ್ಕಾರ ಕೂಡಲೇ ಅಧಿಸೂಚನೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಬಿ.ಸಿ. ನಾಗೇಶ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಪೋಷಕಿ ಆಶಾ, ‘ಪಬ್ಲಿಕ್ ಪರೀಕ್ಷೆಗಳನ್ನು ಎದುರಿಸಲು ಮಕ್ಕಳು ಮಾನಸಿಕವಾಗಿ ಸದೃಢರಾಗಿರುವುದಿಲ್ಲ. ಪರೀಕ್ಷೆಗಳನ್ನು
ದೂರದ ಕೇಂದ್ರಗಳಲ್ಲಿ ನಿಗದಿಪಡಿಸಿದರೆ ವಿದ್ಯಾರ್ಥಿಗಳಿಗೆ ಸಂಚಾರದ ತೊಂದರೆಯಾಗುತ್ತದೆ. ಆದ್ದರಿಂದ ಪಬ್ಲಿಕ್ ಪರೀಕ್ಷೆಯ ತೀರ್ಮಾನವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.